ಬೆಂಗಳೂರು: ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಇಂದಿನಿಂದ ಮುಕ್ತವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯನ್ನು ಪೂರೈಸಲು ಸರ್ಕಾರ ಸರ್ವಸಿದ್ಧವಾಗಿದೆ.
ಈ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ ಯೂನಿಟ್ಗಳ ಮೇಲೆ ಶೇ.10 ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿರುತ್ತಾರೆ. ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಸಬೇಕು
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂ. ಕಚೇರಿ, ವಿದ್ಯುತ್ ಕಚೇರಿಗಳಲ್ಲಿ ನೋಂದಾಯಿಸಬಹುದು ಆಧಾರ್ ಕಾರ್ಡ್, ಆರ್ಆರ್ ನಂಬರ್, ಮೊಬೈಲ್ ಸಂಖ್ಯೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಗೃಹಜ್ಯೋತಿ ಯೋಜನೆ ಅಡಿ ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ.