ದಾವಣಗೆರೆ: ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯ ಸ್ಥಾಪನೆಗೆ ಚಿಂತನೆ ಮಾಡಲಾಗಿದ್ದು, ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಪರಿಶಿಷ್ಟ ಪಂಗಡ ವರ್ಗದ ಕಲ್ಯಾಣ ಸಚಿವ ಬಿ.ನಾಗೇಂದ್ರ ಹೇಳಿದರು. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಮಾತನಾಡಿದ ಅವರು‘ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಅಥವಾ ಮೈಸೂರು ಭಾಗದ ಹೆಚ್.ಡಿ.ಕೋಟೆಯಲ್ಲಿ ವಿಶ್ವ ವಿದ್ಯಾಲಯ ಸ್ಥಾಪನೆಗೆ ಚಿಂತನೆ ಮಾಡಲಾಗುತ್ತಿದೆ ಎಂದರು.
ಇನ್ನು ಬಹುದಿನಗಳಿಂದ ಬುಡಕಟ್ಟು ವಿಶ್ವ ವಿದ್ಯಾಲಯ ಸ್ಥಾಪನೆ ಬಗ್ಗೆ ಬೇಡಿಕೆ ಇತ್ತು. ಈಗಾಗಲೇ ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೂ ತರಲಾಗಿದೆ. ರಾಜ್ಯದಲ್ಲಿ ವಾಲ್ಮೀಕಿ ಸೇರಿದಂತೆ ವಿವಿಧ ಬುಡಕಟ್ಟು ಜನಾಂಗಗಳಿವೆ. ಇದೇ ಕಾರಣಕ್ಕೆ ಬುಡಕಟ್ಟು ವಿಶ್ವ ವಿದ್ಯಾಲಯ ಸ್ಥಾಪನೆಗೆ ಚಿಂತನೆ ಮಾಡಲಾಗಿದ್ದು, ಈಗಾಗಲೇ ಬೆಂಗಳೂರಿನಲ್ಲಿ ವಾಲ್ಮೀಕಿ ವಸತಿ ನಿಲಯ ಸ್ಥಾಪನೆ ಮಾಡಲಾಗಿದೆ. ಇನ್ನು ಮುಂದೆ ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಆರ್ಥಿಕ ನೆರವು ನೀಡಲಾಗುವುದು ಎಂದರು