ಬೆಂಗಳೂರು: ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು FCI ನಿರಾಕರಣೆ ಹಿನ್ನಲೆ ಕಾಂಗ್ರೆಸ್ನಿಂದ ಇಂದು ಬೆಳಿಗ್ಗೆ 11.30 ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆ ಭಾಗವಾಗಿ ನಾಳೆ ಬೆಂಗಳೂರಿನಲ್ಲಿ ಬೃಹತ್ ಹೋರಾಟ ಮಾಡಲು ನಿಶ್ಚಯಿಸಿದ್ದು, ಜಿಲ್ಲಾ ಕೇಂದ್ರಗಳಲ್ಲಿಯೂ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಪ್ಲ್ಯಾನ್ ಮಾಡಲಾಗಿದೆ.
ಇನ್ನು ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಬೆಂಗಳೂರಿನ ಶಾಸಕರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.