ಹಾಸನ : ಪುಂಡರ ಬೈಕ್ ವೀಲ್ಹಿಂಗ್ ಹುಚ್ಚಾಟಕ್ಕೆ ಇಬ್ಬರು ಯುವತಿಯರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಸಾಲಗಾಮೆ ರಸ್ತೆಯ ಸಹ್ಯಾದ್ರಿ ಚಿತ್ರಮಂದಿರ ಬಳಿ ನಡೆದಿದೆ. ಜನನಿಬಿಡ ಪ್ರದೇಶದಲ್ಲಿ ವೀಲ್ಹಿಂಗ್ ಮಾಡಿಕೊಂಡು ಬಂದು ಪುಂಡರು ಭೂಮಿಕಾ ಹಾಗೂ ಸಿಂಚನೆಗೆ ಡಿಕ್ಕಿ ಹೊಡೆದಿದ್ದಾರೆ.
ಭೂಮಿಕಾ ತಲೆಗೆ ಬಲವಾದ ಪೆಟ್ಟು ಬಿದ್ದ ಹಿನ್ನಲೆಯಲ್ಲಿ ಬೆಂಗಳೂರಿಗೆ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇತ್ತ, ಆಕ್ರೋಶಗೊಂಡ ಸಾರ್ವಜನಿಕರು ಡಿಕ್ಕಿ ಹೊಡೆದ ಶಾಕೀರ್ ಹಾಗೂ ಅಪ್ರಾಪ್ತನ ಬೆಟ್ಟೆ ಬಿಚ್ಚಿ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.