ಚಾಮರಾಜನಗರ: ಗುಂಡ್ಲುಪೇಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಐಶರ್ ಲಾರಿ ಮತ್ತು ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ಬರುತ್ತಿದ್ದ ಸ್ಯಾಂಟ್ರೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರ್ ಚಾಲಕ ಸಜೀವ ದಹನವಾಗಿದ್ದಾನೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಬಳಿ ಘಟನೆ ಈ ಭೀಕರ ಅಪಘಾತ ಸಂಭವಿಸಿದ್ದು, ಡಿಕ್ಕಿ ರಭಸಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರಿನ ಚಾಲಕ ಸಜೀವ ದಹನವಾಗಿದ್ದಾನೆ.
ಮುಜಾಮಿಲ್ ಮಹಮದ್ ಎಂಬಾತ ಸಜೀವ ದಹನವಾದ ದುರ್ದೈವಿ ಎನ್ನಲಾಗಿದೆ. ಶನಿವಾರ ರಾತ್ರಿ 11 ಗಂಟೆಯಲ್ಲಿ ಈ ದುರ್ಘಟನೆ ನಡೆದಿದೆ. ಮೈಸೂರು ಕಡೆಯಿಂದ ಬರುತ್ತಿದ್ದ ಕಾರು ಮತ್ತೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಕೇರಳ ಕಡೆಯಿಂದ ಮೈಸೂರಿಗೆ ಬರುತ್ತಿದ್ದ ಐಶರ್ ಲಾರಿಗೆ ಡಿಕ್ಕಿ ಹೊಡೆದಿದೆ.
ಘಟನಾ ಸ್ಥಳಕ್ಕೆ ಬೇಗೂರು ಪೊಲೀಸ್ ವೃತ್ತ ನಿರೀಕ್ಷಕ ಕಿರಣ್ ಗೌಡ, ಸಬ್ ಇನ್‌ಸ್ಪೆಕ್ಟರ್ ಚರಣ್ ಗೌಡ ಹಾಗೂ ಅಗ್ನಿಶಾಮಕ ದಳದವರು ಕೂಡಲೇ ಸ್ಥಳಾಗಮಿಸಿ ಬೆಂಕಿ ನಂದಿಸಿದ್ದಾರೆ.
ಚಾಲಕನ ದೇಹ ಶೇಖಡಾ 80 ರಷ್ಟು ಸುಟ್ಟ ಕಾರಣ ಕಾರಿನ ಚಾಲಕ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವಿಷಯ ತಿಳಿಯುತ್ತಿದ್ದಂತೆ ತಡರಾತ್ರಿ ಚಾಮರಾಜನಗರ ಪೋಲೀಸ್ ವರಿಷ್ಟಾಧಿಕಾರಿ ಪದ್ಮಿನಿಸಾಹೋ ಭೇಟಿ ನೀಡಿಪರಿಶೀಲಿಸಿದ್ದಾರೆ.