ಬೆಳಗಾವಿ: ಇತ್ತೀಚಿಗೆ ವರದಿಯಾಗಿದ್ದ ಎರಡು ಎಲೆಕ್ಟ್ರಾನಿಕ್ ಅಂಗಡಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರಗೋಡ ಪೋಲಿಸರು ಚುರುಕಿನ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಗಳನ್ನು ಬಂಧಿಸಿದ್ದಾರೆ.
ಸವದತ್ತಿ ತಾಲೂಕಿನ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತಿಚಿಗೆ ಎರಡು ಎಲೆಕ್ಟ್ರಿಕಲ್ ಅಂಗಡಿಗಳು ಕಳ್ಳತನವಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಮುರಗೋಡ ಪೊಲೀಸರು ಇಬ್ಬರು ಆರೋಪಗಳನ್ನು ಬಂಧಿಸಿ, ಬಂಧಿತರಿಂದ 10 ಬಂಡಲ್ ವೈಂಡಿಂಗ್ ವಾಯರ್, ಸುಟ್ಟ ಮೋಟಾರ್ ಗಳ ಸ್ಕ್ರ್ಯಾಪ್ ವೈಂಡಿಂಗ್ ವಾಯರ್ ಸೇರಿದಂತೆ ಒಟ್ಟು 3 ಲಕ್ಷ 85 ಸಾವಿರ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಯನ್ನು 24 ವರ್ಷದ ಶಕೀಲ್ ಹುಸೇನಸಾಬ್ ಸಯ್ಯದ್ ಎಂದು ಗುರುತಿಸಲಾಗಿದೆ. ಇನ್ನು ಕೃತ್ಯಕ್ಕೆ ಬಳಸಿದ ಬೈಕ್ ಗಳನ್ನು ವಶಪಡಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ರಾಮದುರ್ಗ ಡಿಎಸ್ಪಿ ರಾಮನಗೌಡ ಹಟ್ಟಿ ಮಾರ್ಗದರ್ಶನದಲ್ಲಿ ಸಿಪಿಐ ಐ.ಎಮ್.ಮಠಪತಿ, ಪಿಎಸ್ಐ ಎಸ್.ಎಮ್.ಕಾರಜೋಳ ಸೇರಿದಂತೆ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಆರೋಪಿಗಳ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ತಂಡದಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಗಳ ಕಾರ್ಯ ವೈಖರಿಗೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.