ಬೆಳಗಾವಿ: ಕೊನೆಯ ಶ್ರಾವಣ ಸೋಮವಾರದ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಬೆಳಗಾವಿಯ ಕುಮಾರಸ್ವಾಮಿ ಲೇಔಟ್ ನ ಶಿವಾಲಯಕ್ಕೆ ಭೇಟಿ ನೀಡಿ ಶಿವನ ಆಶೀರ್ವಾದ ಪಡೆದರು.
ಈ ವೇಳೆ ವಿಶೇಷ ಪೂಜೆ ನೆರವೇರಿಸಿದ ಅವರು, ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು. ಈ ವೇಳೆ ದೇಗುಲ ಕಮಿಟಿಯವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.
ದೇವಸ್ಥಾನ ಸಮಿತಿ ಸದಸ್ಯರು, ಅರ್ಚಕರು, ಸ್ಥಳೀಯ ಗಣ್ಯರು, ಮಹಿಳೆಯರು ಈ ವೇಳೆ ಉಪಸ್ಥಿತರಿದ್ದರು.