ಕೂಗು ನಿಮ್ಮದು ಧ್ವನಿ ನಮ್ಮದು

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು…!!?

ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮದಲ್ಲಿ ಇಂದು ಎಸ್‌ಎಸ್ಎಲ್ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.

ಆನಂದಪುರದ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿ ಪರಶುರಾಮ್ ನೇಣಿಗೆ ಶರಣಾದ ದುರ್ದೈವಿ.

ಬೆಳಿಗ್ಗೆ ಎದ್ದ ತಕ್ಷಣ ಮನೆಯವರು ಹಿಂಬಾಗಿಲಿಗೆ ತೆರಳಿದಾಗ ಕಂಬಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಆನಂದಪುರದ ಸಬ್ ಇನ್ಸ್ ಪೆಕ್ಟರ್ ಯುವರಾಜ್‌ ಕಂಬಳಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!