ಧಾರವಾಡ: ಆಕಳು ಮೈ ತೊಳೆಯಲು ಹೋಗಿ ಇಬ್ಬರು ಬಾಲಕರು ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ. ಧಾರವಾಡ ತಾಲ್ಲೂಕಿನ ಕ್ಯಾರಕೊಪ್ಪ ಗ್ರಾಮದ ಯುವಕರು ಶಾಲೆ ರಜೆ ಹಿನ್ನೆಲೆಯಲ್ಲಿ ಗ್ರಾಮದ ಕೆರೆಯಲ್ಲಿ ಆಕಳು ಮೈ ತೊಳೆಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದೆ.
ಆಕಳುಗಳ ಮೈ ತೊಳೆಯುವಾಗ ಗ್ರಾಮದ ಕೆರೆಯಲ್ಲಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಈ ಇಬ್ಬರು ಬಾಲಕರು ಸಾವನ್ನಪ್ಪದ್ದಾರೆ. ಮೃತ್ಯುಂಜಯ ಯಲ್ಲಪ್ಪ ಕಾಮಧೇನು (14) ಮತ್ತು ರೋಹಿತ ಅರ್ಜುನ ಪೂಜಾರ (13) ಇಬ್ಬರು ಮೃತ ದುರ್ದೈವಿಗಳಾಗಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡ ಗ್ರಾಮೀಣ ಪೊಲೀಸರು ತನಿಖೆ ಕೈಗೊಂಡಿದ್ದಾರೆ.