ಕೂಗು ನಿಮ್ಮದು ಧ್ವನಿ ನಮ್ಮದು

ಶಾಸಕ ಎಂ.ಪಿ.ರೇಣುಕಾಚಾರ್ಯ ಗೆ ಕೊರೊನಾ ಪಾಸಿಟಿವ್: ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ

ದಾವಣಗೆರೆ: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಕೊರೋನಾ ಪಾಸಿಟಿವ್ ದೃಡಪಟ್ಟಿದೆ. ತಮ್ಮ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದ ಬಗ್ಗೆ ಸ್ವತಃ ರೇಣುಕಾಚಾರ್ಯ ಮಾಹಿತಿ ನೀಡಿದ್ದಾರೆ. ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನಲೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೋವಿಡ್ ಟೆಸ್ಟ್ ಗೆ ಒಳಪಟ್ಟಿದ್ದರು. ಈ ಹಿಂದೆ 9 ಬಾರಿ ಕೋವಿಡ್ ಟೆಸ್ಟ್ ಗೆ ಒಳಪಟ್ಟಿದ್ದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ನೆಗೆಟಿವ್ ವರದಿ ಬಂದಿತ್ತು. ಈಗ 10ನೇ ಬಾರಿಯ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಇನ್ನು ತಮ್ಮ ಸಂಪರ್ಕಕ್ಕೆ ಬಂದವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳುವಂತೆ ಶಾಸಕ ರೇಣುಕಾಚಾರ್ಯ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ನಾನು ಆರೋಗ್ಯವಾಗಿ ಇದ್ದೇನೆ. ಕ್ಷೇತ್ರದ ಜನತೆಯ ಆಶಿರ್ವಾದದಿಂದ ಗುಣಮುಖನಾಗಿ ಬರುತ್ತೇನೆ ಎಂದು ಎಂ.ಪಿ.ರೇಣುಕಾಚಾರ್ಯ ಹೇಳಿದ್ದು, ಸಧ್ಯ ಬೆಂಗಳೂರಿನ ತಮ್ಮ ಮನೆಯಲ್ಲಿ ರೇಣುಕಾಚಾರ್ಯ ಹೋಮ್ ಐಸೊಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

error: Content is protected !!