ಕೂಗು ನಿಮ್ಮದು ಧ್ವನಿ ನಮ್ಮದು

ಬೆಳಗಾವಿಯ ನೂತನ ಕಾಂಗ್ರೆಸ್ ಭವನ ಉದ್ಘಾಟನೆ: ಸಿದ್ದರಾಮಯ್ಯ, ಡಿಕೆಶಿ ಯಿಂದ ದೀಪ ಬೆಳಗಿಸಿ ಚಾಲನೆ

ಬೆಳಗಾವಿ: ಬೆಳಗಾವಿಯಲ್ಲಿ ಕಾಂಗ್ರೆಸ್ ಭವನ ಉದ್ಘಾಟನೆಯಾಗಿದೆ. ನಗರದ ಆರ್.ಟಿ.ಓ ವೃತ್ತದ ಬಳಿ ಭವ್ಯವಾಗಿ ನಿರ್ಮಿಸಲಾದ ಕಾಂಗ್ರೆಸ್ ಭವನವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಉದ್ಘಾಟನೆ ಮಾಡಿದರು. ದೀಪ ಬೆಳಗಿಸುವ ಮೂಲಕ ಕಾಂಗ್ರೆಸ್ ನಾಯಕರು ನೂತನ ಕಾಂಗ್ರೆಸ್ ಭವನ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ ಹಾಗೂ ಎಸ್.ಆರ್.ಪಾಟೀಲ್, ಲಕ್ಷ್ಮೀ ಹೆಬ್ಬಾಳಕರ್, ಅಂಜಲಿ ನಿಂಬಾಳಕರ್ ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದಾರೆ.

error: Content is protected !!