ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸ್ವತಃ ಸಚಿವ ಪ್ರಹ್ಲಾದ್ ಜೋಷಿ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಈ ಕುರಿತು ಸ್ಪಷ್ಟಪಡಿಸಿದ್ದಾರೆ. ಇನ್ನು ಸಚಿವ ಪ್ರಹ್ಲಾದ ಜೋಷಿ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ರೀತಿ ಬರೆದುಕೊಂಡಿದ್ದಾರೆ. “ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ” ಎಂದು ತಿಳಿಸಿದ್ದಾರೆ.
ಇನ್ನು ಸಚಿವ ಪ್ರಹ್ಲಾದ ಜೋಷಿಗೆ ಕೊರೊನಾ ಸೊಂಕು ಧೃಡಪಡುತ್ತಿದ್ದಂತೆ ಇತ್ತ ಬೆಳಗಾವಿಯಲ್ಲಿ ಆತಂಕ ಶುರುವಾಗಿದೆ. ನಿನ್ನೆಯಷ್ಟೇ ಬೆಳಗಾವಿಗೆ ಆಗಮಿಸಿದ್ದ ಪ್ರಹ್ಲಾದ್ ಜೋಷಿ, ದಿವಂಗತ ಸುರೇಶ್ ಅಂಗಡಿ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಅಲ್ಲದೇ ಬೆಳಗಾವಿಯ ಪೈ ರೆಸಾರ್ಟ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ್ದರು.
ಇನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಷಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಬೆಳಗಾವಿಯ ಸ್ಥಳಿಯ ಶಾಸಕರು, ಬಿಜೆಪಿ ಮುಖಂಡರು ಸಾಥ್ ನೀಡಿದ್ದರು. ಇದರಿಂದ ಸುರೇಶ್ ಅಂಗಡಿ ಕುಟುಂಬಸ್ಥರು, ಮಾದ್ಯಮ ಸ್ನೇಹಿತರು ಸೇರಿದಂತೆ ರಾಜಕೀಯ ಮುಖಂಡರು, ಪೊಲೀಸ್ ಅಧಿಕಾರಿಗಳಿಗೆ ಆತಂಕ ಶುರುವಾಗಿದೆ.