ಬೆಳಗಾವಿ: ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ರಸ್ತೆ ಅಪಘಾತದಲ್ಲಿ ಮಗು ಸೇರಿ ಮೂವರು ಸ್ಥಳದಲ್ಲೇ ದುರ್ಮರಣಕ್ಕಿಡಾಗಿದ್ದಾರೆ. ಗೋಕಾಕ ತಾಲೂಕಿನ ಜತ್ತ-ಜಾಂಬೋಟಿ ರಾಜ್ಯ ಹೆದ್ದಾರಿಯ ಸಂಗನಕೇರಿ ಬಳಿ ಶನಿವಾರ ಈ ದುರ್ಘಟನೆ ಸಂಭವಿಸಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯೆ ಈ ಅಪಘಾತ ನಡೆದಿದೆ.
ಗಂಡ-ಹೆಂಡತಿ ಮಗುವಿನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಇನ್ನು ಮೃತರು ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದವರು ಎನ್ನಲಾಗಿದ್ದು, ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.