ಚಾಮರಾಜನಗರ: ದೆಹಲಿ ಹೈಕಮಾಂಡ್ ಗೆ ಸಚಿವ ಆಕಾಂಕ್ಷಿಗಳ ಪಟ್ಟಿ ರವಾನಿಸಿದ್ದು ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಮಲೆಮಹದೇಶ್ವರ ಬೆಟ್ಟದಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲು ನಿನ್ನೆ ಸಂಜೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು. ಇನ್ನು ಅಸಮಾಧಾನ ಹೊರಹಾಕಿದ್ದ ಶಾಸಕ ಹರ್ಷವರ್ಧನ್ ಕುರಿತು ವಿ.ಶ್ರೀನಿವಾಸಪ್ರಸಾದ್ ಅವರೊಂದಿಗೆ ಮಾತನಾಡಿದ್ದೇನೆ ಯಾವುದೇ ಸಮಸ್ಯೆ ಇಲ್ಲಾ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಣನೆ ನೀಡಿದರು.
ಮೊದಲಿಗೆ, ಮಲೆ ಮಹದೇಶ್ವರನ ದರ್ಶನ ಪಡೆದ ಸಿಎಂ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು. ನಂತರ ಬೆಟ್ಟದಲ್ಲೇ ಸಿಎಂ ವಾಸ್ತವ್ಯ ಹೂಡಿ ಇಂದು ಗುರುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ. ಮಲೈ ಮಹದೇಶ್ವರ ಸುಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಅಭಿವೃದ್ಧಿ ವಿಷಯದಲ್ಲಿ ಯಾವುದೆ ಉದಾಸಿನ ಮಾಡದೆ ಶೀಘ್ರವಾಗಿ ಪ್ರಾರಂಭಿಸಲಾಗುವುದು. ಸರ್ಕಾರದಿಂದ ಎಷ್ಟು ಅನುದಾನ ಕೊಡಲು ಸಿದ್ದರಿದ್ದೆವೆ ಹಾಗೂ ಮಲೈ ಮಹದೇಶ್ವರ ಬೆಟ್ಟದ ಸುತ್ತ ಮುತ್ತ ಇರುವ ಶಾಲೆಗಳ ಅಭಿವೃದ್ಧಿಯನ್ನು ಪ್ರಾಧಿಕಾರ ದಿಂದ ದತ್ತು ಪಡೆಯಲಾಗುವುದು ಎಂದರು.
ಇನ್ನು ಇದೆ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ ಮರಾಠ ಅಭಿವೃದ್ಧಿ ನಿಗಮವನ್ನು ತಪ್ಪಾಗಿ ಅರ್ಥೈಸಲಾಗಿದೆ. ಅವರು ಸಹ ನಮ್ಮ ಅಣ್ಣ ತಮ್ಮಂದಿರು. ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ನಿಗಮದಂತೆ ಇದು ಸಹ ಒಂದು. ಶಿವಾಜಿ ಮಹಾರಾಜರು ಮೂಲ ಹುಟ್ಟು ಕರ್ನಾಟಕ ಇವರ ವಂಶ ಬೆಳ್ಳಿಯಪ್ಪ ವಂಶ ಅಭಿವೃದ್ಧಿ ನಿಗಮ ಮಾಡುವುದು ಸಮಾಜದಲ್ಲಿ ಹಿಂದುಳಿದವರನ್ನು ಮೆಲಕ್ಕೆತ್ತಲು. ಅಲ್ಲದೆ ಶೈಕ್ಷಣಿಕವಾಗಿ ಉನ್ನತಮಟ್ಟಕ್ಕೆ ಕೊಂಡೊಯ್ಯಲು. ಬಂದ್ ಗೆ ಕರೆ ನೀಡಿರುವ ಸಂಘಟನೆಗಳು ದಯವಿಟ್ಟು ಬಂದ್ ಮಾಡಬಾರದಾಗಿ ವಿನಂತಿಸಿದರು.