ಕೂಗು ನಿಮ್ಮದು ಧ್ವನಿ ನಮ್ಮದು

ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದಿದ್ದ ಡಿಎಸ್ಪಿಗೆ ಜೈಲು ಶಿಕ್ಷೆ: ಕಲಬುರ್ಗಿ ಕೋರ್ಟ್ ಮಹತ್ವದ ತೀರ್ಪು

ಕಲಬುರ್ಗಿ: ವಶಕ್ಕೆ ಪಡೆದಿದ್ದ ಟಾಟಾ ಸುಮೊ ವಾಹನ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್ ಇನಸ್ಪೆಕ್ಟರ್ ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಕಲಬುರ್ಗಿ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅಂದಿನ ಶಹಾಬಾದ್ ಪೊಲೀಸ್ ಠಾಣೆಯ ಸಿಪಿಐ ವಿಜಯಲಕ್ಷ್ಮಿ ಗೆ ನಾಲ್ಕು ವರ್ಷ ಜೈಲು ಶಿಕ್ಷೆ 10 ಸಾವಿರ ರೂಪಾಯಿ ದಂಡ ವಿಧಿಸಿ ಕೋರ್ಟ್ ಆದೇಶ ಮಾಡಿದೆ. ಪೆಟ್ರೋಲ್ ಬಂಕ್ ನಲ್ಲಿ ಡಿಸೆಲ್ ತುಂಬಿಸುವ ವಿಚಾರಕ್ಕೆ ಗಲಾಟೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2015 ರಲ್ಲಿ ನಡೆದಿದ್ದ ಗಲಾಟೆ ಪ್ರಕರಣ ಸಂಬಂಧ ಜಪ್ತಿ ಮಾಡಿದ್ದ ಟಾಟಾ ಸುಮೋ ಬಿಡುಗಡೆಗೆ 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಂದಿನ ಸಿಪಿಐ ವಿಜಯಲಕ್ಷ್ಮಿ ಟಾಟಾ ಸುಮೋ ಮಾಲೀಕ ರಾಜು ಎಂಬಾತನ ಬಳಿ ಹಣಕ್ಕೆ ಬೇಡಿಕೆ ಇಟ್ಟು, ಲಂಚದ 25 ಸಾವಿರ ರೂಪಾಯಿ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಸಿಪಿಐ ವಿಜಯಲಕ್ಷ್ಮಿ ಲಂಚ ಸ್ವೀಕಾರ ಪ್ರಕರಣದ ಸುಧಿರ್ಘ ವಿಚಾರಣೆ ನಡೆಸಿ ಕೋರ್ಟ್ ಗೆ ಲೋಕಾಯುಕ್ತ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದಲ್ಲಿ ವಿಚಾರಣೆ ನಡೆಸಿ ಆರೋಪ ಸಾಬಿತಾದ ಹಿನ್ನಲೆ ಅಂದಿನ ಸಿಪಿಐ ಇಂದಿನ ಡಿವೈಎಸ್ಪಿ ವಿಜಯಲಕ್ಷ್ಮಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಕಲಬುರ್ಗಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಲಯ ಈ ಮಹತ್ವದ ಆದೇಶ ನಿಡಿದ್ದು, ನ್ಯಾಯಮೂರ್ತಿ ಸತೀಶ್ ಸಿಂಗ್ ಅವರು ಈ ತೀರ್ಪು ನೀಡಿದ್ದಾರೆ.

error: Content is protected !!