ಕೂಗು ನಿಮ್ಮದು ಧ್ವನಿ ನಮ್ಮದು

ಕಾಂಗ್ರೇಸ್ ಪಕ್ಷದವ್ರು ಸತ್ಯಹರಿಶ್ಚಂದ್ರರಲ್ಲಾ: ಸದನದಲ್ಲಿ ಕುಟುಕಿದ ಬೊಮ್ಮಾಯಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿನ ಸತ್ಯಾ ಸತ್ಯತೆ ಹೊರ ಬರುವುದು ಹಾಗೂ ಅಪರಾಧಿಗಳಿಗೆ ಶಿಕ್ಷೆ ಆಗೋದು ಕಾಂಗ್ರೆಸ್ ಪಕ್ಷಕ್ಕೆ ಬೇಕಾಗಿಲ್ಲ. ಹೀಗಾಗಿ ಸಿಡಿ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ಪಕ್ಷವನ್ನು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಮಂಗಳವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದವರು ಸಿಡಿ ವಿಚಾರವನ್ನು ಮುಂದಿಟ್ಟುಕೊಂಡು ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದ ಕಾಂಗ್ರೆಸ್ ಸದಸ್ಯರ ನಡವಳಿಕೆಯನ್ನು ಬೊಮ್ಮಾಯಿ ಕಟುವಾಗಿ ಟೀಕಿಸಿದರು.

ಕಾಂಗ್ರೆಸ್ ಪಕ್ಷದವರೇನು ಸತ್ಯ ಹರಿಶ್ಚಂದ್ರರೇನಲ್ಲ. 2016 ರಲ್ಲಿ ಅಂದಿನ ಸಚಿವ ಮೇಟಿ ಪ್ರಕರಣದಲ್ಲಿ ಏನಾಯ್ತು? ಆಗ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿದ್ದರು. ಮಾಧ್ಯಮದಲ್ಲಿ ಪ್ರಸಾರವಾಗಿರುವ ಸಿಡಿಯ ಸತ್ಯಾಸತ್ಯತೆ ಅರಿಯಲು ಮೇಟಿ ಪ್ರಕರಣವನ್ನು ಸಿಐಡಿಗೆ ವಹಿಸಲಾಯಿತು. ವಿಚಾರಣೆ ಮಾಡಿ ವರದಿ ಕೊಡಿ ಅಂತಾ ಸೂಚಿಸಲಾಗಿತ್ತು. ಆಗ ಮೇಟಿ ಪ್ರಕರಣದ ಕುರಿತು ಯಾವ ಪೊಲೀಸ್ ಠಾಣೆಯಲ್ಲಿಯೂ FIR ಎಫ್ ಐ ಆರ್ ದಾಖಲಾಗಿರಲಿಲ್ಲ. ವಿಚಾರಣೆಗೆ ಟರ್ಮ್ಸ್ ಮತ್ತು ರೆಫರೆನ್ಸ್ ಇರಲಿಲ್ಲ. ಆಗ ರಾಮಲಿಂಗಾರೆಡ್ಡಿ ಅವರು ಗೃಹ ಸಚಿವರಾಗಿದ್ದರು. ಆಗ ಅವರೂ ಇದನ್ನೇ ಮಾಡಿದ್ದಾರೆ. ಆದರೆ ಈಗ ಜಾರಕಿಹೊಳಿ ಪ್ರಕರಣದಲ್ಲಿ ಎಫ್ ಐ ಆರ್ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷದವರು ಸತ್ಯ ಹರಿಶ್ಚಂದ್ರರಲ್ಲ‌ ಎಂದು ದಾಖಲೆ ಸಮೇತ ಸದನದ ಗಮನ ಸೆಳೆದರು.

ಆಗ ಮೇಟಿ ಪ್ರಕರಣದಲ್ಲಿ ಒಬ್ಬ ವ್ಯಕ್ತಿಯನ್ನೇ ತನಿಖಾಧಿಕಾರಿ ಮತ್ತು ವಿಚಾರಣಾಗೆ ನೇಮಿಸಲಾಗಿತ್ತು. ಆದರೆ ನಾವು ಎಸ್ ಐ ಟಿ ಯನ್ನು ರಚಿಸಿದ್ದೇವೆ. ವಿಚಾರಣೆಗಿಂತ ಮೊದಲೇ ಪ್ರಕರಣದಲ್ಲಿ ಮೇಟಿ ಅವರಿಗೆ ಕ್ಲಿನ್ ಚಿಟ್ ನೀಡಲಾಗಿದೆ‌ ಎಂದು ಆ ಸಂದರ್ಭದಲ್ಲಿ ಹೊರಡಿಸಲಾದ ಆದೇಶ ಪ್ರತಿಗಳನ್ನು ಮಾಧ್ಯಮಗಳಿಗೆ ಪ್ರದರ್ಶನ ಮಾಡಿದರು. ಆಗ ಆ ಸಿಡಿಯಲ್ಲಿ ಇದ್ದ ಮಹಿಳೆಯ ಗತಿ ಏನಾಯಿತು. ಆಗ ಇದೇ ಕಾಂಗ್ರೆಸ್ ಶಾಸಕರು ಮತ್ತು ಸರ್ಕಾರ ಆ ಮಹಿಳೆಯ ವಿರುದ್ಧ ನಿಂತಿತ್ತು. ಹೀಗಾಗಿ ಕಾಂಗ್ರೆಸ್ ಪಕ್ಷದಿಂದ ನಾವು ಪಾಠ ಕಲಿಯಬೇಕಿಲ್ಲ. ಜನರೇ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಧಿಕ್ಕಾರ ಹಾಕಲಿದ್ದಾರೆ ಎಂದು ಬೊಮ್ಮಾಯಿ ಧರಣಿ ನಿರತ ಕಾಂಗ್ರೆಸ್ ಸದಸ್ಯರನ್ನು ಕುಟುಕಿದರು.


error: Content is protected !!