ಸವದತ್ತಿ: ಸವದತ್ತಿಯ ಹರ್ಷ ಶುಗರ್ಸ್ ವತಿಯಿಂದ ಸವದತ್ತಿಯ ನಾವದಗಿ ಆಸ್ಪತ್ರೆಗೆ ಹಾಗೂ ಸರ್ಕಾರಿ ಆಸ್ಪತ್ರೆಗೆ 40 ಆಕ್ಸಿಜನ್ ಸಿಲಿಂಡರ್ ಗಳನ್ನು ವಿತರಿಸಲಾಯಿತು.
ಹರ್ಷ ಶುಗರ್ಸ್ ಸಿಬ್ಬಂದಿ ಸಿಲಿಂಡರ್ ಗಳನ್ನು ಆಸ್ಪತ್ರೆಗಳಿಗೆ ಹಸ್ತಾಂತರಿಸಿದರು.
ಜಗತ್ತಿಗೆ ಮಹಾಮಾರಿಯಾಗಿ ಕಾಡುತ್ತಿರುವ ಕೊರೋನಾದಿಂದಾಗಿ ಸಾವಿರಾರು ಜನ ಉಸಿರಾಟದ ತೊಂದರೆಯಿಂದ ಬಳಲಿ ತಮ್ಮ ಪ್ರಾಣಗಳನ್ನೇ ಕಳೆದುಕೊಳ್ಳುತ್ತಿದ್ದಾರೆ.
ಈ ಸಂಕಷ್ಟದ ಸಮಯದಲ್ಲಿ 40 ಆಕ್ಸಿಜನ್ ಸಿಲಿಂಡರ್ ಗಳನ್ನು ಪೂರೈಕೆ ಮಾಡುತ್ತಿದ್ದೇವೆ. 20 ಆಕ್ಸಿಜನ್ ಸಿಲಿಂಡರ್ ಗಳನ್ನು ನಾವದಗಿ ಆಸ್ಪತ್ರೆಗೆ ಹಾಗೂ ಇನ್ನುಳಿದ 20 ಸಿಲಿಂಡರಗಳನ್ನು ತಹಶಿಲ್ದಾರ ಮುಖಾಂತರ ಸರ್ಕಾರಿ ಆಸ್ಪತ್ರೆಗೆ ಪೂರೈಕೆ ಮಾಡಿದ್ದೇವೆ ಎಂದು ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ.
ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಹಾಗೂ ಇನ್ನಿತರ ಸುರಕ್ಷಿತ ವಸ್ತುಗಳನ್ನು ಉಪಯೋಗಿಸುವ ಮೂಲಕ ಕೊರೋನಾ ಸೋಂಕನ್ನು ತಡೆಯಲು ಪ್ರಯತ್ನಿಸಬೇಕು. ಎಲ್ಲರೂ ಸುರಕ್ಷಿತವಾಗಿದ್ದು, ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಅವರು ವಿನಂತಿಸಿದ್ದಾರೆ.