ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿದ ಶಿಕ್ಷಕಿ ಕೋವೀಡ್ ಮಹಾಮಾರಿಗೆ ಬಲಿಯಾಗಿದ್ದಾರೆ.
ಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರನ್ನು ಬಿಟ್ಟು ಬಿಡದೇ ಕಾಡ್ತಿರುವ ಕೊರೊನಾ ಇವತ್ತು ಹುದಲಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಶ್ರೀದೇವಿ ಹುಕ್ಕೇರಿ(37) ಕೊರೊನಾಗೆ ಬಲಿಯಾಗಿದ್ದಾರೆ.
ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಶಿಕ್ಷಕಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿದ್ದ ಶಿಕ್ಷಕಿ ಮೃತಪಟ್ಟಿದ್ದು ಈ ವರೆಗೆ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿಭಾಯಿಸಿದ 12 ಶಿಕ್ಷಕರು ಕೋವೀಡ್ ಗೆ ಬಲಿಯಾಗಿದ್ದಾರೆ.