ಕೂಗು ನಿಮ್ಮದು ಧ್ವನಿ ನಮ್ಮದು

ಮುಗಿಯಿತು ಟಫ್ ಲಾಕ್ಡೌನ್, ಇಂದಿನಿಂದ ಜೂನ್ 7ರ ವರೆಗೆ ವಿಸ್ತರಿಸಿದ ನಿಯಮ ಜಾರಿ

ಸೋಮವಾರ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವಿದೆ”

ಬೆಳಗಾವಿ: ಮೇ 22 ರಿಂದ 24ರ ಬೆಳಗ್ಗೆ 6 ಗಂಟೆಯವರೆಗಿನ ಎರಡು ದಿನಗಳ ಕಟ್ಟುನಿಟ್ಟಿನ ಲಾಕ್ ಡೌನ್ ಮುಕ್ತಾಯವಾಗುತ್ತಿದ್ದಂತೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಹಿಂದಿನಂತೆ ಲಾಕ್ ಡೌನ್ ಜಾರಿಯಾಗಿದೆ. ಸೋಮವಾರ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವಿದೆ.

ಶನಿವಾರ ಬೆಳಗ್ಗೆ 6 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಬೆಳಗಾವಿ ಜಿಲ್ಲಾದ್ಯಂತ ಕಟ್ಟುನಿಟ್ಟಾದ ಲಾಕ್ ಡೌನ್ ಘೋಷಿಸಲಾಗಿತ್ತು. ಹಾಲು ಮತ್ತು ಔಷಧ ಹೊರತುಪಡಿಸಿ ಯಾವುದೇ ವಸ್ತುಗಳ ಮಾರಾಟ ಮತ್ತು ಖರೀದಿಗೆ ಅವಕಾಶವಿರಲಿಲ್ಲ. ಜಿಲ್ಲೆಯ ಬಹುತೇಕ ಕಡೆ ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಇಂದು ಸೋಮವಾರ ಬೆಳಗ್ಗೆ 6 ಗಂಟೆಯಿಂದ ಜೂನ್ 7ರ ವರೆಗೂ ರಾಜ್ಯದ ಇತರೆಡೆಯಂತೆ ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಯಾಗಲಿದೆ. ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶವಿದೆ. ಆದರೆ 10 ಗಂಟೆಯ ನಂತರ ರಸ್ತೆಗಿಳಿದಲ್ಲಿ ವಾಹನಗಳನ್ನು ಸೀಜ್ ಮಾಡಲಾಗುತ್ತದೆ. ಬೆಳಿಗ್ಗೆ 9.45 ಕ್ಕೇ ಅಂಗಡಿ ಕ್ಲೋಸ್ ಮಾಡಿ ಅಂಗಡಿಕಾರರು ಮನೆಯ ದಾರಿ ಹಿಡಿಯಬೇಕು. 10 ಗಂಟೆಗೆ ರಸ್ತೆಯ ಮೇಲೆ ಯಾರೂ ಕಾಣಬಾರದು. ಒಂದು ವೇಳೆ 10 ಗಂಟೆಯ ನಂತ ಹಾಗೆ ಕಂಡರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೊಲೀಸರಿಗೆ ಆದೇಶ ನೀಡಿದ್ದಾರೆ. ಅದರ ಬೆನ್ನಲ್ಲೇ ಪೊಲೀಸರು ಕೂಡ ನಿತ್ಯ ಬೆಳಿಗ್ಗೆಯೇ ಫೀಲ್ಡಿಗಿಳಿದು ಅನಗತ್ಯ ಹೊರ ಬಂದವರಿಗೆ ದಂಡದ ಜೊತೆಗೆ ಬುದ್ದಿ ಹೇಳುವ ಕೆಲಸ ಮಾಡುತ್ತಿದ್ದಾರೆ.

error: Content is protected !!