ಕೂಗು ನಿಮ್ಮದು ಧ್ವನಿ ನಮ್ಮದು

ಬೆಳಗಾವಿ ನಗರ ಪೊಲೀಸರ ಆರೋಗ್ಯದ ಮೇಲೆ ನಿಗಾ: ಡಿಸಿಪಿ ಡಾ.ವಿಕ್ತಮ್ ಅಮಟೆ

ಬೆಳಗಾವಿ: ಕೋವಿಡ್ 2ನೇ ಅಲೆಯಲ್ಲಿ ಬೆಳಗಾವಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ 70 ಜನ ಪೊಲೀಸರಿಗೆ ಮತ್ತು ಇಬ್ಬರು ಹೋಮ್ ಗಾರ್ಡಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಡಿಸಿಪಿ ಡಾ.ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.
ಮಂಗಳವಾರ ತಮ್ಮ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಡಿಸಿಪಿ ಡಾ.ವಿಕ್ರಮ್ ಆಮ್ಟೆ ನಗರ ವ್ಯಾಪ್ತಿಯಲ್ಲಿ ನಮ್ಮಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವ್ಯಾಕ್ಸಿನೇಶನ್ ಆಗಿರುವುದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ 70 ಜನ ಪೊಲೀಸರಿಗೆ ಮತ್ತು ಇಬ್ಬರು ಹೋಮ್ ಗಾರ್ಡಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಲ್ಲಿ 30 ಜನರು ಸಂಪೂರ್ಣವಾಗಿ ಗುಣಮುಖರಾಗಿದ್ದರೆ, 27 ಜನರು ಕರ್ತವ್ಯಕ್ಕೆ ಮರಳಿದ್ದು. ಮೂವರು ರೆಸ್ಟ್ ತೆಗೆದುಕೊಳ್ಳುತ್ತಿದ್ದಾರೆ. ಅದೇ ರೀತಿ ಇನ್ನು 40 ಜನರು ಹೋಮ್ ಐಸೋಲೇಶನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬೇಕಾದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಈವರೆಗೆ 1400 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ. ಸೆಕೆಂಡ್ ಡೋಸ್ ಇನ್ನು 90 ಜನರು ತೆಗೆದುಕೊಳ್ಳಬೇಕಿದೆ. ಸುಮಾರು 45 ಜನರು ವಿವಿಧ ಆರೋಗ್ಯ ಸಮಸ್ಯೆಯಿಂದ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ಶೇ.98 ರಷ್ಟು ನಮ್ಮ ಪೊಲೀಸರು ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ ಎಂದು ಡಿಸಿಪಿ ಆಮ್ಟೆ ಸ್ಪಷ್ಟಪಡಿಸಿದರು.
ಇನ್ನು ಲಾಕ್ಡೌನ್ ಸೇರಿ ಸರ್ಕಾರದ ಆದೇಶವನ್ನು ಜಾರಿಗೊಳಿಸುವುದು ಪೊಲೀಸರು ಕರ್ತವ್ಯವಾಗಿದೆ. ಹೀಗಾಗಿ ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ ಎಂದು ಶಿಫ್ಟ್ ಮಾಡಿದ್ದೇವೆ. ಪೊಲೀಸರು ತೆಗೆದುಕೊಳ್ಳುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ನಮ್ಮ ಅಧಿಕಾರಿಗಳು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಇದರ ಜೊತೆಗೆ ಅವರಿಗೆ ಬೇಕಾದ ಮಾಸ್ಕ್, ಸ್ಯಾನಿಟೈಸರ್, ಗ್ಲೌಸ್ ಸೇರಿ ಇನ್ನಿತರ ವಸ್ತುಗಳನ್ನು ಪೂರೈಸಿದ್ದೇವೆ. ಇನ್ನು ತನಿಖೆ ಯಾವ ರೀತಿ ಮಾಡಬೇಕು, ಯಾವ ರೀತಿ ಬಂಧಿಸಬೇಕು, ಗಾಡಿ ಸೀಜ್ ಸೇರಿ ಇನ್ನಿತರ ಸಂದರ್ಭದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದನ್ನು ತಿಳಿಸಲಾಗಿದೆ. ಕಡ್ಡಾಯವಾಗಿ ಎಲ್ಲರೂ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ವ್ಯಾಕ್ಸಿನ್ ತೆಗೆದುಕೊಂಡಿದ್ದೇವೆ ಎಂದು ನಿರ್ಲಕ್ಷ ವಹಿಸುವುದು ಸರಿಯಲ್ಲ. ಅದೇ ರೀತಿ ನಾವು ಕೂಡ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು. ಒಟ್ಟಾರೆ ನಮ್ಮ ಪೊಲೀಸರು ಸುರಕ್ಷಿತವಾಗಿ ಇದ್ದುಕೊಂಡು ಫ್ರಂಟ್ಲೈನ್ ವರ್ಕರ್ಗಳಾಗಿ ಕೊರೊನಾ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಡಿಸಿಪಿ ಡಾ.ವಿಕ್ರಮ್ ಆಮ್ಟೆ ವಿಶ್ವಾಸ ವ್ಯಕ್ತಪಡಿಸಿದರು.

error: Content is protected !!