ಕೂಗು ನಿಮ್ಮದು ಧ್ವನಿ ನಮ್ಮದು

ಗಗನಕ್ಕೇರಿದ ಪೆಟ್ರೋಲ್ ಬೆಲೆ; ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ

ನವದೆಹಲಿ: ಒಂದೆಡೆ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿರುದ್ಧ ಕಾಂಗ್ರೆಸ್ ಪಕ್ಷ ದೇಶಾದ್ಯಂತ ಇಂದು ಸಾಂಕೇತಿಕ ಪ್ರತಿಭಟನೆಗೆ ಕರೆ ಕೊಟ್ಟಿದೆ. ಇನ್ನೊಂದೆಡೆ ಕಾಂಗ್ರೆಸ್ ಪ್ರತಿಭಟನೆಯನ್ನು ಮತ್ತು ಕೊರೋನಾ ಹಾಗೂ ಲಾಕ್ಡೌನ್ ಗಳಿಂದ ದೇಶದ ಜನ ಅನುಭವಿಸುತ್ತಿರುವ ಕಷ್ಟ ಕಾರ್ಪಣ್ಯಗಳನ್ನು ಲೆಕ್ಕಿಸದೆ ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಸಲಾಗಿದೆ.ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿರುವ ಕೇಂದ್ರ ಸರ್ಕಾರ ವಿರುದ್ಧ ದೇಶಾದ್ಯಂತ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸುವಂತೆ ಕಾಂಗ್ರೆಸ್ ಕರೆ ಕೊಟ್ಟಿದೆ. ಕೊರೋನಾ ಹಿನ್ನೆಲೆಯಲ್ಲಿ ಪಕ್ಷವು ಸಾಂಕೇತಿಕವಾಗಿ ಪ್ರತಿಭಟನೆ ಮಾಡುತ್ತಿದೆ ಎಂದು ತಿಳಿಸಿದೆ. ಆದರೆ ಇನ್ನೊಂದೆಡೆ ಕೇಂದ್ರ ಸರ್ಕಾರವು ಇಂದು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 29 ಪೈಸೆ ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲೆ 29 ಪೈಸೆ ಬೆಲೆ ಹೆಚ್ಚಳ ಮಾಡಿದೆ. ಇದೇ ಕೇಂದ್ರ ಸರ್ಕಾರ ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ, ಲಾಕ್ಡೌನ್ ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ಸರವಾಗಿದೆ ಎನ್ನುವ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅವಧಿಯನ್ನು ವಿಸ್ತರಿಸಿ ಪಡಿತರ ವಿತರಿಸುತ್ತದೆ. ಇನ್ನೊಂದೆಡೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ಕಷ್ಟ ಕಾಲದಲ್ಲೂ ಜನರ ಜೇಬಿನಿಂದ ಹಣ ಲೂಟಿ ಮಾಡುತ್ತಿದೆ. ಇದೇ ಕೇಂದ್ರ ಸರ್ಕಾರ ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ, ಲಾಕ್ಡೌನ್ ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ಸರವಾಗಿದೆ ಎನ್ನುವ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅವಧಿಯನ್ನು ವಿಸ್ತರಿಸಿ ಪಡಿತರ ವಿತರಿಸುತ್ತದೆ. ಇನ್ನೊಂದೆಡೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ಕಷ್ಟ ಕಾಲದಲ್ಲೂ ಜನರ ಜೇಬಿನಿಂದ ಹಣ ಲೂಟಿ ಮಾಡುತ್ತಿದೆ. ಇದೇ ಕೇಂದ್ರ ಸರ್ಕಾರ ಕೊರೋನಾ ಮಹಾಮಾರಿಯಿಂದ ಜನ ಸಾಯುತ್ತಿದ್ದಾರೆ, ಲಾಕ್ಡೌನ್ ನಿಂದ ಕೋಟ್ಯಾಂತರ ಜನಕ್ಕೆ ನಿತ್ಯದ ಜೀವನ ನಿರ್ವಹಣೆಯೇ ದುಸ್ಸರವಾಗಿದೆ ಎನ್ನುವ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅವಧಿಯನ್ನು ವಿಸ್ತರಿಸಿ ಪಡಿತರ ವಿತರಿಸುತ್ತದೆ. ಇನ್ನೊಂದೆಡೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ಕಷ್ಟ ಕಾಲದಲ್ಲೂ ಜನರ ಜೇಬಿನಿಂದ ಹಣ ಲೂಟಿ ಮಾಡುತ್ತಿದೆ.

error: Content is protected !!