ಬೆಳಗಾವಿ: ಜಿಲ್ಲೆಯಲ್ಲಿ ವಿಕೇಂಡ್ ಲಾಕ್ಡೌನ್ ಮತ್ತಷ್ಟು ಕಠಿಣವಾಗಿದ್ದು, ಬೆಳ್ಳಂಬೆಳ್ಳಗೆ ಪೊಲೀಸರು ಫೀಲ್ಡಿಗಳಿದಿದ್ದಾರೆ. ಕೊರೊನಾ ಪಾಸಿಟಿವ್ ರೇಟ್ ಹೆಚ್ಚಿರುವ ಕಾರಣ ಜಿಲ್ಲೆಯಾದ್ಯಂತ ಜೂನ್ 21ರವರೆಗೆ ಲಾಕ್ಡೌನ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಕ್ರಮಕ್ಕೆ ಮುಂದಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ತಪಾಸಣೆ ನಡೆಸಿದ್ದಾರೆ. ಇನ್ನು ನಿನ್ನೆ ಜಿಲ್ಲೆಯಲ್ಲಿ ಒಟ್ಟು 443 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟಾರೆ ಈವೆರೆಗೆ 690 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.