ಕೂಗು ನಿಮ್ಮದು ಧ್ವನಿ ನಮ್ಮದು

ಹುಲಿಯನ್ನು ಜೀವಿತಾವಧಿ ದತ್ತು ಪಡೆದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ: ಸಹೋದರ ಚನ್ನರಾಜ ಹಟ್ಟಿಹೊಳಿ ಅವರ ಪುತ್ರ ಹರ್ಷಿತ್ ಜನ್ಮದಿನದ ಅಂಗವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಳಗಾವಿಯ ಭೂತರಾಮನಹಟ್ಟಿಯ ಕಿತ್ತೂರ ರಾಣಿ ಚನ್ನಮ್ಮ ಪ್ರಾಣಿ ಸಂಗ್ರಹಾಲಯಕ್ಕೆ ತೆರಳಿ ಶೌರ್ಯ ಎನ್ನುವ ಹುಲಿಯನ್ನು ದತ್ತು ಪಡೆದಿದ್ದಾರೆ.
ಆರಂಭಿಕವಾಗಿ 1 ಲಕ್ಷ ರೂ.ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿರುವ ಲಕ್ಷ್ಮಿ ಹೆಬ್ಬಾಳಕರ್, ಹುಲಿಯ ಸಂಪೂರ್ಣ ಜೀವಿತಾವಧಿ ಆರೈಕೆ ವಹಿಸಿಕೊಂಡಿರುವುದಾಗಿ ತಿಳಿಸಿದರು.

ಈ ಹುಲಿಯ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಂಡಿದ್ದು, ಇದರ ಜೀವಿತಾವಧಿಯವರೆಗೆ ಇದರ ಆರೈಕೆಯು ನನ್ನ ಮೇಲಿರುತ್ತದೆ. ಲಾಕ್ ಡೌನ್ ಕಾರಣದಿಂದಾಗಿ ಪ್ರಾಣಿ ಸಂಗ್ರಹಾಲಯಗಳಿಗೆ ಜನರ ಬರುವಿಕೆ ಕಡಿಮೆಯಾಗಿದ್ದು, ಪ್ರಾಣಿ ಸಂಗ್ರಹಾಲಯಗಳ ನಿರ್ವಹಣೆ ಮತ್ತು ಪ್ರಾಣಿಗಳ ಆರೈಕೆ ಮಾಡುವುದು ಅರಣ್ಯ ಇಲಾಖೆಗೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇವತ್ತು ಅತೀ ಸಂತೋಷದಿಂದ ಈ ಶೌರ್ಯ ಹುಲಿಯನ್ನು ದತ್ತು ಪಡೆದಿದ್ದೇನೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ಇದರ ಆರೈಕೆಯ ಸಲುವಾಗಿ ಪ್ರಾರಂಭದಲ್ಲಿ ಒಂದು ಲಕ್ಷ ರೂ,ಗಳ ಚೆಕ್ ನ್ನು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದೇನೆ. ಸಾರ್ವಜನಿಕರು ಪ್ರಾಣಿಗಳ ಆರೈಕೆಗೆ ಮುಂದಾಗುವ ಮೂಲಕ ಮಾನವೀಯತೆಗೆ ಎಡೆ ಮಾಡಿಕೊಡಬೇಕು ಎಂದು ವಿನಂತಿಸಿದರು.
ಚನ್ನರಾಜ ಹಟ್ಟಿಹೊಳಿ, ಅರಣ್ಯಾಧಿಕಾರಿಗಳು ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

error: Content is protected !!