ಕೂಗು ನಿಮ್ಮದು ಧ್ವನಿ ನಮ್ಮದು

ಅರುಣ್ ಸಿಂಗ್ ಭೇಟಿ ಮಾಡಿ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಅರವಿಂದ ಬೆಲ್ಲದ

ನವದೆಹಲಿ: ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಬಂದು ಮೂರು ದಿನಗಳಿಂದ ದೆಹಲಿಯಲ್ಲೇ ಠಿಕಾಣಿ ಹೂಡಿರುವ ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿತವಾಗುತ್ತಿರುವ ಅರವಿಂದ ಬೆಲ್ಲದ ದಿಢೀರನೇ ಇಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಅವರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಭೇಟಿ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವ ಬದಲಾವಣೆ ಮಾಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ ಅಲ್ಲದೆ, ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ. ಯಡಿಯೂರಪ್ಪ ನಾಯಕತ್ವ ಬದಲಾವಣೆ ಸುತ್ತ ಸೃಷ್ಟಿಯಾಗಿರುವ ಬಿಕ್ಕಟ್ಟು ಬಗೆಹರಿಸಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜೂನ್ 16ರಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದು ಅವರು ಕರ್ನಾಟಕಕ್ಕೆ ಆಗಮಿಸುವ ಮೊದಲೇ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಅವರು ರಾಜ್ಯ ಪ್ರವಾಸದ ವೇಳೆ ಭೇಟಿ ಆಗುವುದು ಮತ್ತು ದೂರು ನೀಡುವುದು ಕಷ್ಟ ಆಗಬಹುದೆಂಬ ಕಾರಣಕ್ಕೆ ಅರವಿಂದ ಬೆಲ್ಲದ ದೆಹಲಿ ಮೂಲಕವೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈಗಾಗಲೇ ಬಿ.ಎಲ್. ಸಂತೋಷ್ ಅವರನ್ನೂ ಭೇಟಿಯಾಗಿದ್ದ ಅರವಿಂದ ಬೆಲ್ಲದ ಸೋಮವಾರ ಅರುಣ್ ಸಿಂಗ್ ಭೇಟಿ ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ ಭೇಟಿಗೂ ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ. ಅರುಣ್ ಸಿಂಗ್ ಭೇಟಿ ವೇಳೆ ಒಂದು ಯಡಿಯೂರಪ್ಪ ವಿರುದ್ಧ ದೂರು ನೀಡಿದ್ದಾರೆ ಇನ್ನೊಂದು ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

error: Content is protected !!