ಬೆಳಗಾವಿ: ಕೆಪಿಸಿಸಿ ಕಾರ್ಯಾಧಕ್ಷ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಯುವ ಮುಖಂಡ ರಾಹುಲ್ ಜಾರಕಿಹೊಳಿ ಘಟಪ್ರಭಾ ಹೆಸ್ಕಾಂ ವಿಭಾಗದ ಎಲ್ಲ ಕೆಇಬಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ತಮ್ಮ ಗೋಕಾಕ ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ 200 ಕ್ಕೂ ಹೆಚ್ಚು ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳನ್ನು ವಿತರಿಸಿದರು.
ಈ ವೇಳೆ ಮಾತನಾಡಿದ ರಾಹುಲ್ ಜಾರಕಿಹೊಳಿ ಕೋವಿಡ್ ದಿನೇ ದಿನೇ ಇಳಿಮುಖವಾಗುತ್ತಿದ್ದು, ಜನರು ಧೈರ್ಯದಿಂದ ಇರಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಎಲ್ಲರೂ ತಪ್ಪದೇ ಲಸಿಕೆ ಪಡೆಯಬೇಕು ಎಂದರು. ಈ ವೇಳೆ ಕಾಂಗ್ರೆಸ್ ಮುಖಂಡರು ಹೆಸ್ಕಾಂ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.