ಕೂಗು ನಿಮ್ಮದು ಧ್ವನಿ ನಮ್ಮದು

ನಾಯಕತ್ವ ಬದಲಾವಣೆ: ಪ್ರತಿಕ್ರಿಯೆ ನೀಡದೆ ಮೌನ ತಾಳಿದ ಸಚಿವ ಈಶ್ವರಪ್ಪ

ಬೆಳಗಾವಿ: ರಾಜ್ಯ ನಾಯಕತ್ವ ಬದಲಾವಣೆ ವಿಚಾರ ಕುರಿತು ಯಾವುದೇ ಪ್ರತಿಕ್ರಿಯೆ ನೀಡಲು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ನಿರಾಕರಿಸಿದ್ದಾರೆ. ಇಲಾಖೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಸಲು ಇಂದು ಬೆಳಗಾವಿಗೆ ಆಗಮಿಸಿದ್ದ ಈಶ್ವರಪ್ಪ ಅವರು, ಈ ವೇಳೆ ನಾಯಕತ್ವ ಬದಲಾವಣೆ ಕುರಿತ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದಾರೆ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಬುಧವಾರ ಎಲ್ಲಾ ಸಚಿವರ ಸಭೆ ನಡೆಸಿದ್ದಾರೆ. ಆಯಾ ಇಲಾಖೆಗಳ ಪ್ರಗತಿ ಮತ್ತು ಕೈಗೊಂಡಿರುವ ಯೋಜನೆಗಳ ಕುರಿತು ಮಾಹಿತಿ ಪಡೆದು ಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅರುಣ್ ಸಿಂಗ್ ಅವರು ಸರ್ಕಾರದ ಚಟುವಟಿಕೆಗಳು ಹೇಗೆ ನಡೆಯುತ್ತಿವೆ ಎಂಬುದರ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಮತ್ತು ಪರಿಹಾರ ಘೋಷಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾಳೆ ಪಕ್ಷದ ಕೋರ್ ಕಮಿಟಿ ಸಭೆಯಿದ್ದು ಅದರಲ್ಲಿ ಭಾಗವಹಿಸುತ್ತೇನೆಂದು ತಿಳಿಸಿದ್ದಾರೆ.

error: Content is protected !!