ಬೆಳಗಾವಿ: ಕೋವಿಡ್ ಸಂಕಷ್ಟ ಸಮಯದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕೋವಿಡ್ ನಿಯಂತ್ರಣ ಮಾಡುವಲ್ಲಿ ಆಶಾ ಕಾರ್ಯಕರ್ತರ ಸೇವೆ ನಿಜಕ್ಕೂ ಶ್ಲಾಘನೀಯ ಎಂದು ಮಾಜಿ ಸಚಿವ ರಮೇಶ ಜಾರಕಿಹೋಳಿ ಗೋಕಾಕ್ ದಲ್ಲಿ ಹೇಳಿದ್ದಾರೆ. ನಂತರ ಬೆಳಗಾವಿ ಲೊಕಸಭಾ ಸದಸ್ಯೆ ಮಂಗಲ ಅಂಗಡಿಯವರ ಪುತ್ರಿ ಶ್ರದ್ಧಾ ಶೆಟ್ಟರ ಅವರ ಸಮ್ಮುಖದಲ್ಲಿ ರಮೇಶ್ ಜಾರಕಿಹೊಳಿ ತಮ್ಮ ಗೃಹ ಕಚೇರಿಯಲ್ಲಿ ದಿನಶಿ ಕಿಟ್ ವಿತರಿಸಿದರು. ಈ ವೇಳೆ ಬಿಜೆಪಿ ಮುಖಂಡರು ಕಾರ್ಯಕರ್ತರು ಇದ್ದರು.