ಕೂಗು ನಿಮ್ಮದು ಧ್ವನಿ ನಮ್ಮದು

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ 6 ತಿಂಗಳುಗಳ ಕಾಲ ಮುಂದೂಡಿ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು : ಕೊರೋನಾ ಕಾರಣದಿಂದಾಗಿ ರಾಜ್ಯದಲ್ಲಿ ನಡೆಯಬೇಕಿದ್ದ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಅಧ್ಯಕ್ಷರು, ಉಪಾಧ್ಯಕ್ಷರ ಸ್ಥಾನಗಳ ಚುನಾವಣೆಯನ್ನು ಮುಂದೂಡಲಾಗಿದೆ. ಚುನಾವಣೆಗಳನ್ನು 6 ತಿಂಗಳ ಕಾಲ ಮುಂದೂಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಎಲ್ ಪ್ರಸಾದ್ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರಿಗೆ, ಯೋಜನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಠಿಯಿಂದ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ ಚುನಾವಣೆ ನಡೆಸುವುದು ಬಾಕಿ ಇದ್ದಲ್ಲಿ, ಚುನಾವಣೆಯನ್ನು ಕೂಡಲೇ ಮುಂದೂಡುವಂತೆ ನಿರ್ದೇಶನ ನೀಡಲಾಗಿದೆ.ಸಚಿವ ಸಂಪುಟ ನಿರ್ಣಯದ ಹಿನ್ನಲೆಯಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿಗಳು ಹಾಗೂ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆ, ಉಪ ಚುನಾವಣೆ ಹಾಗೂ ಸದರಿ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಚುನಾವಣೆಗಳನ್ನು  ಮುಂದೂಡಲಾಗಿದೆ. ದಿನಾಂಕ 26-04-2021ರಿಂದ ಮುಂದಿನ 6 ತಿಂಗಳ ಅವಧಿಗೆ ಮುಂದೂಡುವ ಬಗ್ಗೆ ಸಚಿವ ಸಂಪುಟವು ತೀರ್ಮಾನಿಸಿದ್ದು, ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

error: Content is protected !!