ಕೂಗು ನಿಮ್ಮದು ಧ್ವನಿ ನಮ್ಮದು

ಬೆಳಗಾವಿ ಡಿಸಿಗೆ ಸಿಎಂ ತುರ್ತು ಕರೆ ಮಹಾಮಳೆ ಹಿನ್ನಲೆಯಲ್ಲಿ ಕರೆ ಮಾಡಿದ ಸಿಎಂ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೊಂದಡೆ ಪಶ್ಚಿಮ ಘಟ್ಟಗಳಲ್ಲಿ ನಿರಂತರವಾಗಿ ಮಳೆಯ ಆರ್ಭಟದಿಂದ ಜಿಲ್ಲೆಯ ಹಲವು ಚಿಕ್ಕ ಪುಟ್ಟ ಸೇತುವೆಗಳು ಜಲಾವೃತ್ತಗೊಂಡಿವೆ. ಮತ್ತು ಹಲವು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸಂಪರ್ಕವು ಸಹ ಕಡಿತಗೊಂಡಿವೆ. ಇದರಿಂದ ಸ್ವತಹ ರಾಜ್ಯದ ದೊರೆ ಸಿಎಂ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಡಿಸಿ ಹಿರೇಮಠ ಅವರಿಗೆ ಕರೆ ಮಾಡಿ ಮುಂಜಾಗೃತ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೂ ನಾಳೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಿಎಂ ಚರ್ಚೆ ನಡೆಸಲಿದ್ದಾರೆ.

error: Content is protected !!