ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ, ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕೆ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಇಂದು ವಿಧಾನಸೌಧದ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರೋ ಒಂದಿಬ್ಬರು ವಿರೋಧ ಮಾತನಾಡಬಹುದು, ಅಂತವರು ತಮ್ಮ ಸಮಸ್ಯೆಗಳನ್ನು ಬಂದು ಮಾತನಾಡಿ ಬಗೆಹರಿಸಿಕೊಳ್ಳಲಿ, ನಾಯಕರ ಮಧ್ಯೆ ಯಾವುದೇ ರೀತಿಯ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವಿಜಯೇಂದ್ರ ವಿರುದ್ಧದ ಕಿಕ್ ಬ್ಯಾಗ್ ಆರೋಪ ಕೂಡ ಆಧಾರರಹಿತ, ನೀರಾವರಿ ಇಲಾಖೆಯಲ್ಲಿನ ಟೆಂಡರ್ ಆರೋಪದ ಬಗ್ಗೆ ಇಲಾಖೆಯ ಅಧಿಕಾರಿಗಳು ಸ್ಪಷ್ಟನೆ ನೀಡುತ್ತಾರೆ ಎಂದರು.