ದಾವಣಗೆರೆ: ಸಿಎಂ ಯಡಿಯೂರಪ್ಪ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭೆಯ ಬೆಂಬಲ ಇದೆ. ಹೀಗಾಗಿ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲ್ಲಿದ್ದಾರೆ ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುವ ಬಗ್ಗೆ ಈಗಾಗಲೇ ಸ್ವಾಮೀಜಿಗಳು ಹೇಳಿದ್ದಾರೆ. ಆದರೆ ನಾನು ಮಾತ್ರ ವೀರಶೈವ ಮಹಾಸಭಾದ ನಿಲುವು ಹೇಳುವೆ. ಸದ್ಯ ಕೊವಿಡ್ ಪರಿಸ್ಥಿತಿ ಇದ್ದು, ಈಗ ಮುಖ್ಯಮಂತ್ರಿ ಬದಲಾಯಿಸುವ ಪರಿಸ್ಥಿತಿಯಲ್ಲ ಎಂದು ಅವರು ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಶಾಸಕ ಮತ್ತು ಹಿರಿಯ ರಾಜಕಾರಣಿಯೂ ಆದ ಶಾಮನೂರು ಶಿವಶಂಕರಪ್ಪ ಅವರ ಮಾತು ಸದ್ಯದ ಬೆಳವಣಿಗೆಗಳಿಂದ ಅತ್ಯಂತ ಮಹತ್ವ ಪಡೆದುಕೊಂಡಿದೆ.