ಬೆಳಗಾವಿ: ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಮಾಡುವ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಉಚಿತವಾಗಿ ಸ್ಮಾರ್ಟ್ ಫೋನ್ ಮತ್ತು ಟ್ಯಾಬ್ ಗಳನ್ನು ಬೆಳಗಾವಿಯಲ್ಲಿ ವಿಥ್ಯಾರ್ಥಿಗಳಿಗೆ ವಿತರಣೆ ಮಾಡುವುದರ ಮೂಲಕ ಕೋವಿಡ್ ಹಿನ್ನೆಲೆಯಲ್ಲಿ ಆನ್ಲೈನ್ ಶಿಕ್ಷಣವು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಮುಟ್ಟಬೇಕು ಎನ್ನುವ ಉದ್ದೇಶದಿಂದ ಕರ್ನಾಟಕ ಘನ ಸರ್ಕಾರದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ. ಎಸ್. ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಹಾಗೂ ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಶ್ರೀ ಅಶ್ವತ್ ನಾರಾಯಣ ಅವರ ಮಾರ್ಗದರ್ಶನದಲ್ಲಿ ಬಡ ಮಕ್ಕಳಿಗೆ ಸ್ಮಾರ್ಟ್ ಫೋನ್ ಟ್ಯಾಬ್ಲೆಟ್ ವಿತರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಮತ್ತು ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಅವರು ಸರ್ಕಾರಿ ಪಾಲಿಟೆಕ್ನಿನ್ ಹಾಗೂ ಸರ್ಕಾರಿ ಪಿ. ಯು ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿತರಿಸಿದರು. ಈ ವೇಳೆ ಉಪಮುಖ್ಯಮಂತ್ರಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಅಧ್ಯಕ್ಷತೆ ವಹಿಸಿದ್ದರು.
ಇನ್ನು ಈ ವೇಳೆ ಮಾತನಾಡಿದ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಮಾತನಾಡಿ ಬಡ ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಗೊಳ್ಳಲಿ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಮರು ಕನಸು ಕಂಡಿರುವ 21ನೇ ಶತಮಾನ ಭಾರತೀಯರ ಶತಮಾನ ಎಂದು ಹೇಳಿದ್ದರು, ಆ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಪ್ರತಿಭೆಗಳು ದೇಶದಲ್ಲಿ ಮತ್ತು ಅಂತರಾಷ್ಟ್ರೀಯ ಮಟ್ಟಕ್ಕೆ ಶಿಕ್ಷಣದಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಿ ನಮ್ಮ ನಾಡಿಗೂ ಹಾಗೂ ಭಾರತ ದೇಶಕ್ಕೂ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಶ್ರೀ ಅನಿಲ್ ಬೆನಕೆ ಹಾಗೂ ಕಾಲೇಜಿನ ಸಿಬ್ಬಂದಿಗಳು ಇದ್ದರು.