ಬೆಂಗಳೂರು: ರಾಜ್ಯದಲ್ಲಿ ಕರೋನಾ ಕಡಿಮೆಯಾಗುತ್ತಿದ್ದು ಲಾಕ್ಡೌನ್ ಅನ್ನು ಹಂತ ಹಂತವಾಗಿ ಸಡಿಲಿಕೆ ಮಾಡುತ್ತಾ ಬರುತ್ತಿದೆ. ಹೀಗಿರುವಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಜುಲೈ 21 ರಿಂದ ರಾಜ್ಯದಲ್ಲಿ ಬಸ್ ಸಂಚಾರ ಆರಂಭಗೊಂಡಿತ್ತು. ಇದೀಗ ನಾಳೆಯಿಂದ ಹೊರ ರಾಜ್ಯಗಳಿಗೂ ಕೆಎಸ್ಆರ್ಟಿಸಿ ಬಸ್ ಸಂಚಾರ ಸೇವೆ ಆರಂಭವಾಗುತ್ತಿದೆ. ನಾಳೆಯಿಂದ ಮಹಾರಾಷ್ಟ್ರ, ಪುಣೆ, ಮುಂಬೈ ನಂತಹ ನಗರ ಪ್ರದೇಶಗಳಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಮಾಡಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಜನರಿಗೆ ಅನುಕೂಲವಾಗುವಂತೆ ಜುಲೈ 25ರಿಂದ ಬೆಂಗಳೂರು, ಶಿವಮೊಗ್ಗ, ಮಂಗಳೂರು ಸೇರಿದಂತೆ ಹೊರ ರಾಜ್ಯಗಳಿಗೂ ಸಾರಿಗೆ ಸಂಚಾರ ಆರಂಭಿಸಲಿದೆ ಎಂದು ತಿಳಿಸಿದ್ದಾರೆ.
ಹೊರರಾಜ್ಯಗಳಿಗೆ ಹೋಗುವ ಬಸ್ಗಳಿಗೆ ಸ್ಯಾನಿಟೈಜ್ ಮಾಡಲಾಗುತ್ತದೆ ಮತ್ತು ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ. ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ಕಾಯ್ದಕೊಳ್ಳಬೇಕು ಮತ್ತು ಕೊವಿಡ್-19 ಮಾರ್ಗಸೂಚಿಯನ್ನು ಅನುಸರಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.