ಕೂಗು ನಿಮ್ಮದು ಧ್ವನಿ ನಮ್ಮದು

ರಾಜೀನಾಮೆ ನಿರ್ಧಾರ ಕೈಬಿಟ್ಟ ಸಾಹುಕಾರ್: ಮೈಸೂರಿನಲ್ಲಿ ಸಾಹುಕಾರ್ ಹೇಳಿದ್ದೇನು.? Exclusive

ಮೈಸೂರು: ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದು ಸತ್ಯ. ಆದರೆ ಕೆಲವು ಹಿರಿಯರ ಸಲಹೆ ಮೇರೆಗೆ ಈಗ ಅದನ್ನ ಕೈಬಿಟ್ಟಿದ್ದೇನೆ. ಇನ್ನು 8 ರಿಂದ 10 ದಿನ ನನಗೆ ಮಾಧ್ಯಮದವರು ಬಿಟ್ಟು ಬಿಡಿ. ನಾನು ಅಲ್ಲಿಯವರೆಗು ಏನು ಮಾತಾಡಲ್ಲ ಎಂದು ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ನಾನು ಮನಸ್ಸು ನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ನಿಜ ಎಂದು ಪದೇ ಪದೇ ಒತ್ತಿ ಹೇಳಿದ ರಮೇಶ್ ಜಾರಕಿಹೊಳಿ. ರಾಜೀನಾಮೆ ಕೊಟ್ಟರೂ ನಾನೊಬ್ಬನೇ ಕೊಡ್ತೇನೆ. ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದ ಸಾಹುಕಾರ್, ಕಾಂಗ್ರೆಸ್ ಮುಳುಗುವ ಹಡಗು, ನಾನೇಕೆ ಆ ಪಕ್ಷಕ್ಕೆ ಹೋಗಲಿ ಎಂದಿದ್ದಾರೆ. ಬಿಜೆಪಿ ಪಕ್ಷ ನನ್ನನ್ನು ಬಹಳ ಗೌರವಯುತವಾಗಿ ನಡೆಸಿಕೊಂಡಿದೆ. ನಾನು ಬಿಜೆಪಿಗೆ ದ್ರೋಹ ಮಾಡುವ ಕೆಲಸ ಎಂದಿಗು ಮಾಡೋದಿಲ್ಲ.

ನಾನು ಮುಂಬೈಗೆ ಹೋಗಿದ್ದು ಸತ್ಯ. ದೇವೇಂದ್ರ ಫಡ್ನವಿಸ್ ನನ್ನ ರಾಜಕೀಯ ಗಾಡ್ ಫಾದರ್. ಅವರ ಬಳಿ ನನ್ನ ಮನಸ್ಸಿನ ನೋವುಗಳನ್ನ ಹೇಳಿಕೊಂಡಿದ್ದೇನೆ ಎಂದಿದ್ದಾರೆ. ಇನ್ನು ಸರ್ಕಾರ ಬೀಳಿಸಿ ಸರ್ಕಾರ ರಚಿಸುವ ಶಕ್ತಿ ದೇವರು ಕೊಟ್ಟಿದ್ದಾನೆ. ಇಂತಹ ನಾನು ಸಚಿವನಾಗುವುದಕ್ಕೆ ಲಾಭಿ ಮಾಡುತ್ತೇನಾ? ನನಗೆ ಇನ್ನು ಆ ಸ್ಥಿತಿ ಬಂದಿಲ್ಲ. ಸ್ವಾಮೀಜಿ ಅವರ ಬಳಿ ಬಂದು ಸಚಿವ ಸ್ಥಾನಕ್ಕೆ ಒತ್ತಡ ಹಾಕಿಸುವ ಸ್ಥಿತಿಗೆ ನಾನು ಬಂದಿಲ್ಲ. ನಾನು ಸ್ವಾಮೀಜಿ ಬಳಿ ಬಂದಿದ್ದು ಅವರ ಮಾತೃಶ್ರೀ ನಿಧನಕ್ಕೆ ಸಂತಾಪ ಸೂಚಿಸಲು ಬಂದಿದ್ದೆ ಎಂದು ಸಾಹುಕಾರ್ ಸ್ಪಷ್ಟಪಡಿಸಿದ್ದಾರೆ. ಇಲ್ಲಿ ಯಾವ ರಾಜಕಾರಣವನ್ನು ಚರ್ಚೆ ಮಾಡಿಲ್ಲ.

ಇನ್ನೊಬ್ಬರನ್ನ ಸಚಿವನ್ನಾಗಿ ಮಾಡುವ ಶಕ್ತಿ ಇರುವ ನಾನು. ನಾನು ಸಚಿವನಾಗೋಕೆ ಲಾಬಿ ಮಾಡುತ್ತೇನಾ? ಇರುವ ಶಾಸಕ ಸ್ಥಾನವನ್ನೇ ಬಿಡುವ ಚಿಂತನೆ‌ ಮಾಡಿದ್ದವನು ನಾನು. ಇಲ್ಲಿ ಸಚಿವ ಸ್ಥಾನದ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಎರಡು ವರ್ಷ ಪೂರೈಸುತ್ತಾರೆ. ಮುಂದಿನ ಚುನಾವಣೆಯು ಅವರ ನೇತೃತ್ವದಲ್ಲಿ ನಡೆಯಲಿದೆ. ನಾವು ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಸಧ್ಯ ತಲೆದೂರಿದ್ದ ರಾಜೀನಾಮೆ ವಿಚಾರಕ್ಕೆ ತೆರೆ ಎಳೆದಿದ್ದಾರೆ.

error: Content is protected !!