ಕೂಗು ನಿಮ್ಮದು ಧ್ವನಿ ನಮ್ಮದು

ಶಾಲೆ ಆರಂಭಕ್ಕೆ ಆತುರ ಬೇಡ – ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು: ಕೊರೊನಾ ಲಸಿಕೆ ವಿತರಣೆ ಹಾಗೂ ಶೈಕ್ಷಣಿಕ ಚಟುವಟಿಕೆ ಆರಂಭಿಸುವುದರ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಮಕ್ಕಳ ವಿದ್ಯಾಭ್ಯಾಸ ಮುಖ್ಯ ಎನ್ನುವುದು ನಿಜ. ಆದರೆ, ಶಿಕ್ಷಣದ ಜತೆಗೆ ಜೀವ ಕೂಡಾ ಬಹಳ ಮುಖ್ಯ. ಹೀಗಾಗಿ ಶಾಲಾ ಆರಂಭದ ಬಗ್ಗೆ ಆತುರದ ನಿರ್ಧಾರ ಬೇಡ. ಸ್ವಲ್ಪ ಗಮನಿಸಬೇಕು ಎಂದು ಹೇಳುವ ಮೂಲಕ ಶಿಕ್ಷಣ ಸಚಿವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

24 ಲಕ್ಷದ 37 ಸಾವಿರದ 732 ಜನ ಉನ್ನತ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರೆಲ್ಲರಿಗೂ ಇಂದಿನಿಂದಲೇ ಲಸಿಕೆ ವಿತರಣೆ ಮಾಡಲಾಗುತ್ತದೆ. 10 ವಷರ್ದೊಳಗಿನ ಮಕ್ಕಳ ಎಲ್ಲಾ ಪೋಷಕರಿಗೂ ಕೊರೊನಾ ಲಸಿಕೆ ನೀಡುವುದಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ಲಸಿಕೆ ಪೂರೈಕೆಯನ್ನು ಹೆಚ್ಚಳ ಮಾಡುವುದಕ್ಕೆ ಮನವಿ ಮಾಡುತ್ತೇವೆ. ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ. ಆದರೆ, ಶಿಕ್ಷಣದ ಜತೆಗೆ ಜೀವ ಕೂಡ ಬಹಳ ಮುಖ್ಯ. ಹೀಗಾಗಿ ಈ ವಿಚಾರದಲ್ಲಿ ಆತುರದ ನಿರ್ಧಾರ ಬೇಡ ಎಂದು ಹೇಳಿದ್ದಾರೆ.

error: Content is protected !!