ಕೂಗು ನಿಮ್ಮದು ಧ್ವನಿ ನಮ್ಮದು

ನಾಲ್ವರು ಮಕ್ಕಳೊಂದಿಗೆ ನೀರಿನ ಹೊಂಡಕ್ಕೆ ಹಾರಿ ದಂಪತಿ ಆತ್ಮಹತ್ಯೆ: ಶವ ಹೊರತೆಗೆದ ಶಹಪುರ ಪೊಲೀಸರು

ನೀರಿನ ಹೊಂಡಕ್ಕೆ ಬಿದ್ದು ಆರು ಜನ ಆತ್ಮಹತ್ಯೆ, ಶವಶೋಧ ಕಾರ್ಯದ ದೃಶ್ಯಗಳು

ಯಾದಗಿರಿ: ನೀರಿನ ಹೊಂಡಕ್ಕೆ ಕಾರಿ ಒಂದೇ ಕುಟುಂಬದ ಆರು ಜನ ದುರ್ಮರಣಕ್ಕಿಡಾಗಿರುವ ಮನಕಲಕುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದ್ದು, ನಾಲ್ಕು ಮಕ್ಕಳೊಂದಿಗೆ ನೀರಿನ ಹೊಂಡಕ್ಕೆ ಹಾರಿ ಪೋಷಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ತಂದೆ ಭೀಮರಾಯ, ತಾಯಿ ಶಾಂತಮ್ಮ ತನ್ನ ನಾಲ್ಕು ಮಕ್ಕಳೊಂದಿಗೆ ನೀರಿನ ಹೊಂಡಕ್ಕೆ ಹಾರಿ ಆತ್ಮಹತ್ಯೆಗೆ ಶರಾಗಿದ್ದಾರೆ. ಸುಮಿತ್ರಾ, ಶ್ರೀದೇವಿ, ಲಕ್ಷ್ಮೀ ಹಾಗೂ ಶಿವರಾಜ ನಾಲ್ಕು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ದೋರನಹಳ್ಳಿ ಗ್ರಾಮದಲ್ಲಿ ಸೂತಕದ ಛಾಯೆ ನಿರ್ಮಾಣವಾಗಿದೆ. ಇನ್ನು ಘಟನಾ ಸ್ಥಳಕ್ಕೆ ಶಹಾಪುರ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದು, ಸ್ಥಳಿಯರ ಸಹಾಯದಿಂದ ನಾಲ್ವರ ಶವಗಳನ್ನು ಹೊರ ತೆಗೆಯಲಾಗಿದೆ. ಸ್ಥಳದಲ್ಲಿ ಸಂಬಂಧಿಕರ ಆಕ್ರಂಧನ ಮುಗಿಲು ಮುಟ್ಟಿದ್ದು, ಶಹಾಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಜಾಡು ಹಿಡಿದ ಪೊಲೀಸರು ಆತ್ಮಹತ್ಯೆಗೆ ಮತ್ತಷ್ಟು ಕಾರಣಗಳನ್ನು ಹುಡುಕುತ್ತ, ತನಿಖೆ ಚುರುಕುಗೊಳಿಸಿದ್ದಾರೆ.

error: Content is protected !!