ಕೂಗು ನಿಮ್ಮದು ಧ್ವನಿ ನಮ್ಮದು

ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿರುವ ಯುವಕರ ಶೋಧಕ್ಕೆ NDRF ನೆರವು : ಡಿಸಿಎಂ ಸವದಿ

ಬೆಳಗಾವಿ: ಅಥಣಿ ತಾಲೂಕಿನ ಹಲ್ಯಾಳದಲ್ಲಿ ಇಂದು ನಾಲ್ವರು ಯುವಕರು ಕೃಷ್ಣಾ ನದಿಯಲ್ಲಿ ಕೊಚ್ಚಿ ಹೋಗಿರುವುದು ದುರ್ದೈವದ ಸಂಗತಿಯಾಗಿದೆ.

ಈ ನತದೃಷ್ಟ ಯುವಕರ ಶೋಧ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುತ್ತಿದ್ದು, ಈ ಬಗ್ಗೆ N.D.R.F. (National Disaster Response Force ) ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ನೆರವನ್ನು ಸಹ ಪಡೆದುಕೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ನಿರಂತರವಾಗಿ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಸೂಕ್ತ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಸವದಿಯವರು ವಿವರಿಸಿದ್ದಾರೆ.

error: Content is protected !!