ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಹೈಕಮಾಂಡ್ ಹೀಗಾಗಲೇ ಈ ಬಗ್ಗೆ ಸ್ಪಷ್ಪಪಡಿಸಿದೆ. ಮತ್ತೆ ಪದೇ ಪದೇ ಈ ವಿಚಾರದ ಬಗ್ಗೆ ಚರ್ಚೆ ಬೇಡ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಈ ರಾಜ್ಯದ ಸಿಎಂ ಆಗಿ ಇರುತ್ತಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ಕೂಡಲೇ ರಾಜಕೀಯ ಬಣ್ಣ ಹಚ್ಚುವುದು ಬೇಡ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮತ್ತೆ ಮತ್ತೆ ಗೊಂದಲ ಯಾರಿಗೂ ಬೇಡ ಎಂದಿದ್ದಾರೆ. ಇನ್ನು ಕಾಂಗ್ರೆಸ್ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೆ ಉಳಿದಿಲ್ಲ. ಕೊರೊನಾ ಸಂಕಷ್ಟ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದ ಮರೆತು. ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ ಎಂದು ವ್ಯಂಗ್ಯವಾಡಿದ್ದಾರೆ