ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಗುಟಗುದ್ದಿ ಗ್ರಾಮದಲ್ಲಿ ನೂತನವಾಗಿ ಸಂಘಟನೆಗೊಂಡ ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗವನ್ನು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಬುಧವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಮಾಡಿರುವ ಸಾಧನೆ ಮಾತನಾಡಬೇಕೇ ಹೊರತು ಮಾತನಾಡುವುದೇ ಸಾಧನೆಯಾಗಬಾರದು ಎಂಬ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿಯವರು ನಡೆದು ಬಂದಿದ್ದಾರೆ. ಅವರ ಮಾರ್ಗದರ್ಶನದಲ್ಲಿಯೇ ನಾವು ಸಹ ನಡೆಯೋಣ’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಜೊತೆ ಫೋಟೋ ಕ್ಲಿಕಿಸಿ ಕೊಂಡ ರಾಹುಲ್ ಅಭಿಮಾನಿಗಳು ಸಂಭ್ರಮ ಪಟ್ಟರು.ಈ ವೇಳೆ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.