ಕೂಗು ನಿಮ್ಮದು ಧ್ವನಿ ನಮ್ಮದು

ನಟ ಜಗ್ಗೇಶ್ ಪುತ್ರನ ಕಾರು ಅಪಘಾತ

ಬೆಂಗಳೂರು : ನಟ ಜಗ್ಗೇಶ್ ಹಿರಿಯ ಪುತ್ರನ ಕಾರು ಅಪಘಾತಕ್ಕೀಡಾಗಿದೆ. ಆಂಧ್ರಪ್ರದೇಶದ ಅಗಲದುಗ್ಗಿ ಬಳಿ ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಘಟನೆಯಲ್ಲಿ ಜಗ್ಗೇಶ್ ಪುತ್ರ ಗುರುರಾಜ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಗುರುರಾಜ್ ಅವರೇ ಕಾರು ಚಲಾಯಿಸುತ್ತಿದ್ದು, ಅವರ ಬಲಗೈಗೆ ಸಣ್ಣಗಾಯವಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಚೆನ್ನಾಗಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಜಗ್ಗೇಶ್ ಕುಟುಂಬ ಮಾಹಿತಿ ನೀಡಿದೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ.

error: Content is protected !!