ಕೂಗು ನಿಮ್ಮದು ಧ್ವನಿ ನಮ್ಮದು

ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ ಹೆಚ್ಚಿಸಲು ಒತ್ತಾಯ – ವಿಧಾನ ಪರಿಷತ್ ಸದಸ್ಯ ಎಸ್ ವ್ಹಿ ಸಂಕನೂರ

ಧಾರವಾಡ: ರಾಜ್ಯದಲ್ಲಿ ಸುಮಾರು 1000ಕ್ಕೂ ಹೆಚ್ಚು ಉಪನ್ಯಾಸಕರು ಹ¯ವಾರು ವರ್ಷಗಳಿಂದ ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಈ ಅತಿಥಿ ಉಪನ್ಯಾಸಕರಿಗೆ ಕಳೆದ ನಾಲ್ಕು ವಷರ್ಷಗಳಿಂದ ಗೌರವ ಸಂಭಾವನೆಯನ್ನು ಹೆಚ್ಚಿಸಿರುವುದಿಲ್ಲಾ. ಹಾಗಾಗಿ ಅವರಿಗೆ ರೂ. 9000-12000 ರವರೆಗೆ ಹೆಚ್ಚಿಸಲು ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಒತ್ತಾಯಿಸಿ ಶಿಕ್ಷಣ ಸಚಿವರಾದ ಎಸ್.ಸುರೇಶಕುಮಾರ ಅವರಿಗೆ ಖುದ್ದಾಗಿ ಬೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

2021ರ ಎಪ್ರಿಲ್ ನಲ್ಲಿ ಕರ್ತವ್ಯದಿಂದ ಬಿಡುಗಡೆ ಮಾಡಿದ ಅರೆಕಾಲಿಕ ಉಪನ್ಯಾಸಕರನ್ನು ಆದೇಶವನ್ನು ಹಿಂಪಡೆದು ಪುನಃ ಕರ್ತವ್ಯಕ್ಕೆ ಹಾಜರಾಗಲು ಮರು ಆದೇಶ ಮಾಡಲು ಮತ್ತು ಅವರಿಗೆ ಸೇವಾ ಭದ್ರತೆ ನೀಡಲು ಒತ್ತಾಯಿಸಿದರು.

ಅನುದಾನಿತ ಕಾಲೇಜು ಶಿಕ್ಷಕರಿಗೂ ಕ್ಯಾನ್ಸರನಿಂದ ಬಳಲಿದವರಿಗೆ ವಿಶೇಷ ಸಾಂಧರ್ಭಿಕ ರಜೆ ಮಂಜೂರು ಮಾಡಲು ಒತ್ತಾಯ.
ಇತ್ತೀಚೆಗೆ ರಾಜ್ಯದಲ್ಲಿ ಸರಕಾರಿ ನೌಕರರು ಕ್ಯಾನ್ಸರ್ ಕಾಯಿಲೆಯಿಂದ ಬಳಲಿದವರಿಗೆ ಚಿಕಿತ್ಸೆ ಮತ್ತು ವಿಶ್ರಾಂತಿ ಪಡೆಯಲು ಸರಕಾರ ವಿಶೇಷ ಸಾಂಧರ್ಭಿಕ ರಜೆ ಮಂಜೂರು ಮಾಡಿದೆ. ಅದರಂತೆ ಅನುದದಾನಿತ ಶಾಲಾ ಕಾಲೇಜುಗಲ್ಲಿ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಯವರಿಗೂ ವಿಶೇಷ ಸಾಂದರ್ಭಿಕ ರಜೆಯ ಸೌಲಭ್ಯವನ್ನು ವಿಸ್ತರಿಸಲು ವಿಧಾನ ಪರಿಷತ್ ಸದಸ್ಯ ಎಸ್.ವ್ಹಿ.ಸಂಕನೂರ ಶಿಕ್ಷಣ ಸಚಿವರಿಗೆ ಒತ್ತಾಯಿಸಿದ್ದಾರೆ.

error: Content is protected !!