ಕೂಗು ನಿಮ್ಮದು ಧ್ವನಿ ನಮ್ಮದು

ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಶಾಸಕರಿಗೆ ಮುಖ್ಯಮಂತ್ರಿ ಸ್ಥಾನ?

ಬೆಂಗಳೂರು: ಉತ್ತರ ಕರ್ನಾಟಕದ ಲಿಂಗಾಯತ ಶಾಸಕರಿಗೆ ಮುಂದಿನ ಸಿಎಂ ಪಟ್ಟ ಸಿಗುವ ಸಾಧ್ಯತೆಗಳಿವೆ ಎಂಬ ಮಾತುಗಳು ಎಲ್ಲೆಡೆ ಹರಿದಾಡುತ್ತಿವೆ. ಇನ್ನೂ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜೀನಾಮೆ ನೀಡುವ ಕುರಿತು ತಾವೇ ಹೇಳಿದ್ದಾರೆ. ಜೊತೆಗೆ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆಗಳು ಸಹ ಈಗ ಎಲ್ಲಡೆ ಜೋರಾಗಿವೆ. ಇನ್ನೂ ಈಗಾಗಲೇ ದೆಹಲಿ ಮಟ್ಟದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಹೆಸರು ಘೋಷಣೆಗೆ ಮುಹೂರ್ತ ಪಿಕ್ಸ್ ಮಾಡುತ್ತಿದ್ದಾರೆ ಎನ್ನಲಾಗಿದೆ.

ಜೊತೆಗೆ ದೆಹಲಿಯಲ್ಲಿ ಮೋದಿಯವರು, ಮತ್ತು BJP ರಾಷ್ಟ್ರೀಯ ಅಧ್ಯಕ್ಷ J.P ನಡ್ಡಾ, ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಪ್ರಹ್ಲಾದ್ ಜೋಶಿಯವರು ರಹಸ್ಯ ಚರ್ಚೆಯಲ್ಲಿ ಭಾಗಿಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಜೊತೆಗೆ ಕೆಲವೇ ಗಂಟೆಗಳಲ್ಲಿಯೇ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪನವರು ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ. ೭೫ ವರ್ಷ ವಯಸ್ಸು ಆದರೂ ಪಕ್ಷ ನನಗೆ ಮುಖ್ಯಮಂತ್ರಿ ಸ್ಥಾನ ನೀಡಿ ಸೇವೆ ಸಲ್ಲಿಸಲು ನನಗೆ ಅವಕಾಶ ಮಾಡಿಕೊಟ್ಟಿತು. ಇನ್ನೂ ಪ್ರಧಾನಿ ಮೋದಿ, J.P ನಡ್ಡಾ, ಅಮಿತ್ ಶಾರವರಿಗೆ ಈ ಅವಕಾಶ ನೀಡಿದ್ದಕ್ಕೆ ನಾನು ಹೃದಯ ಪೂರ್ವಕವಾಗಿ ಧನ್ಯವಾದಗಳನ್ನು ತೀಳಿಸುತ್ತೇನೆ. ಜೊತೆಗೆ ರಾಜೀನಾಮೆಯನ್ನು ದುಃಖದಿಂದಲ್ಲ, ಸಂತೋಷದಿಂದ ನೀಡುತ್ತಿದ್ದೇನೆ ಎಂದಿದ್ದಾರೆ.

ಇನ್ನೂ ರಾಜ್ಯದಲ್ಲಿ ಮತ್ತೆ BJP ಸರ್ಕಾರವು ಅಧಿಕಾರಕ್ಕೆ ಬರಬೇಕೆಂದು ಕೇಂದ್ರದ ನಾಯಕರು ಅಪೇಕ್ಷೆ ಹೊಂದಿದ್ದಾರೆ. ಮೋದಿ, J.P ನಡ್ಡಾ ಜಿ ಮತ್ತು ಶಾ ಅವರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೆ. ಜೊತೆಗೆ BJP ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕೆಲಸ ಮಾಡೋಣ ಎಂದು ಹೇಳಿದ್ರು. ಇನ್ನೂ ಕರ್ನಾಟಕದಲ್ಲಿ BJP ಸರ್ಕಾರ ರಚನೆಯಾದ ಸಂದರ್ಭವನ್ನು ನೆನಪಿಸಿಕೊಂಡು ಸಿಎಂ ಭಾವುಕರಾದ್ರು.

ಅಂದು ಮೊದಲ ಬಾರಿಗೆ ಇಬ್ಬರು ಶಾಸಕರಾಗಿ ಆಯ್ಕೆಯಾಗಿದ್ದೇವು. ಆದ್ರೆ ನನ್ನ ಜೊತೆಯಲ್ಲಿದ್ದ ಮತ್ತೊಬ್ರು ರಾಜೀನಾಮೆ ನೀಡಿದಾಗ ಏಕಾಂಗಿಯಾಗಿ ಹೋರಾಟ ನಡೆಸಿದ್ದೇನೆ. ಅಂದು ಆಯೋಜಿಸಿದ ಕಾರ್ಯಕ್ರಮಗಳನ್ನು ನೋಡಿ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್ ಅಚ್ಚರಿ ವ್ಯಕ್ತಪಡಿಸಿದ್ದರು ಎಂದು ಹೇಳಿದರು
ಕೇಂದ್ರದಲ್ಲಿ ವಾಜಪೇಯಿ ಸರ್ಕಾರ ರಚನೆಯಾಗಿತ್ತು. ಅಂದು ವಾಜಪೇಯಿ ಅವರು ಕೇಂದ್ರದ ಸಚಿವರಾಗುವಂತೆ ಹೇಳಿದ್ದರು. ಇಲ್ಲ ನಾನು ರಾಜ್ಯದಲ್ಲಿ ಪಕ್ಷ ಕಟ್ಟಬೇಕು. ದೆಹಲಿ ರಾಜಕಾರಣಕ್ಕೆ ಬರಲ್ಲ ಅಂತ ವಿನಮ್ರದಿಂದ ಹೇಳಿದೆ ಎಂದು ಹೇಳಿ ಭಾವುಕರಾದರು.

error: Content is protected !!