ಕೂಗು ನಿಮ್ಮದು ಧ್ವನಿ ನಮ್ಮದು

ಸಿಎಂ ರಾಜೀನಾಮೆಯಿಂದ ಮನನೊಂದು ಅಭಿಮಾನಿಯೊಬ್ಬ ಸುಸೈಡ್

ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ಮನನೊಂದು ಅಭಿಮಾನಿಯೊಬ್ಬ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ರವಿ (40 ವರ್ಷ) ಆಲಿಯಾಸ್ ರಾಜಾಹುಲಿ ಎಂಬ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡಿಯೂರಪ್ಪ ರಾಜೀನಾಮೆಯಿಂದ ಬೇಸರಗೊಂಡ ರವಿ ಕಳೆದ ರಾತ್ರಿ ವೇಳೆ ನೇಣಿಗೆ ಕೊರಳೊಡ್ಡಿರುವುದು ತಿಳಿದುಬಂದಿದೆ. ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದು, ನನ್ನ ರಾಜೀನಾಮೆಯಿಂದ ಮನನೊಂದ ಗುಂಡ್ಲುಪೇಟೆ ತಾಲ್ಲೂಕು ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು ಎಂದಿದ್ದಾರೆ.

error: Content is protected !!