ಬೆಂಗಳೂರು: ಕರ್ನಾಟಕದಲ್ಲಿ ಸಹಕಾರ ಇಲಾಖೆ ಹಾಗೂ ಸಚಿವರಾಗಿ ಕಾರ್ಯ ನಿರ್ವಹಿಸಿದ ಎಸ್.ಟಿ ಸೋಮಶೇಖರ್ರವರ ಕಾರ್ಯ ವೈಖರಿಯನ್ನು ಕೇಂದ್ರ ಗೃಹ ಮಂತ್ರಿ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅರವರು ಶ್ಲಾಘಿಸಿದ್ದಾರೆ. ಜೊತೆಗೆ ದೇಶದಲ್ಲಿ ಸಹಕಾರಿ ಕ್ಷೇತ್ರವನ್ನು ಒಳ್ಳೆಯ ಮಟ್ಟಕ್ಕೆ ಕೊಂಡೊಯ್ಯುವ ಬಗ್ಗೆ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ರು. ಇನ್ನೂ ಕೇಂದ್ರ ಸರ್ಕಾರ ಇತ್ತೀಚೆಗಷ್ಟೆ ಸಹಕಾರ ಸಚಿವಾಲಯವನ್ನು ಸ್ಥಾಪಿನೆ ಮಾಡಿದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಸಹಕಾರ ವಲಯಕ್ಕೆ ಸಂಬಂಧ ಪಟ್ಟಂತೆ ಸಹಕಾರ ಸಚಿವ ಎಸ್.ಟಿ ಸೋಮಶೇಖರ್ರವರು ಶಾ ಅವರಿಗೆ ವರದಿ ಸಲ್ಲಿಸಿದ್ರು. ಇನ್ನೂ ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಗೃಹ ಸಚಿವರು, ಕರ್ನಾಟಕದಲ್ಲಿ ಸಹಕಾರ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವ ನಿಮಗೆ ನಾನು ಅಭಿನಂದನೆಗಳನ್ನು ತಿಳಿಸುತ್ತೇನೆಂದು ಹೇಳಿದ್ದಾರೆ.
ಇನ್ನೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಸಹಕಾರದ ಸಮೃದ್ಧಿಯ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿತ್ತು. ಹಾಗೂ ಈ ಮೂಲಕ ಎಲ್ಲ ವರ್ಗದ ಜನರನ್ನೂ ನಾವು ತಲುಪಬೇಕು. ಜೊತೆಗೆ ಇದು ಸಹಕಾರ ಕ್ಷೇತ್ರದ ಮೂಲಕ ಕೃಷಿ ಹಾಗೂ ಗ್ರಾಮೀಣ ಭಾಗದ ಅಭಿವೃದ್ಧಿಯಾಗಲಿದೆ. ಜೊತೆಗೆ ಭಾರತದ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ ಎಂಬ ವಿಶ್ವಾಸವು ನನಗಿದೆ ಎಂದಿದ್ದಾರೆ. ಇನ್ನೂ ಸಹಕಾರ ವಲಯವು ಮತ್ತಷ್ಟು ಅಭಿವೃದ್ಧಿಯಾಗಬೇಕು. ಜೊತೆಗೆ ಇನ್ನಷ್ಟು ವಿಸ್ತರಣೆ ಮಾಡಬೇಕಿದೆ. ಮತ್ತು ನಿಮ್ಮ ಯೋಜನೆ ಹಾಗೂ ಕಾರ್ಯಕ್ರಮಗಳಿಗೆ ನನ್ನ ಸಹಕಾರವು ಸದಾ ನಿಮ್ಮ ಜೊತೆಗೆ ಇರುತ್ತದೆ ಎಂದಿದ್ದಾರೆ.