ಬೆಂಗಳೂರು: ಸಿಎಂ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿರುವ ಎಲ್ಲರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿಯವರ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ರು.
ಇನ್ನೂ ಶಾಸಕಾಂಗ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿಯವರು, ನಾನು ಎಲ್ಲರನ್ನು ಒಗ್ಗೂಡಿಸಿಕೊಂಡು, ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಕೆಲಸವನ್ನು ಮಾಡುತ್ತೆನೆ ಎಂದರು. ಜೊತೆಗೆ ಬಿ.ಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಜನಪರ ಆಡಳಿತವನ್ನು ನಾನು ನೀಡುತ್ತೇನೆ ಎಂದ್ರು. ಇನ್ನೂ
ರಾಜ್ಯದಲ್ಲಿ ಕೋರೊನಾ ಸಂಕಷ್ಟ ಮತ್ತು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ, ಅದನ್ನು ನಾನು ಪರಿಹರಿಸುವ ಕೆಲಸವನ್ನು ಮಾಡುತ್ತೇನೆ ಎಂದಿದ್ದಾರೆ. ಇನ್ನೂ ಹೈಕಮಾಂಡ್ ಯಾವುದೇ ಷರತ್ತು ವಿಧಿಸಿಲ್ಲ. ಬಿ.ಎಸ್ ಯಡಿಯೂರಪ್ಪನವರ ನಿರೀಕ್ಷೆಗಳನ್ನು ನಾನು ಈಡೇರಿಸುತ್ತೇನೆ ಎಂದು ಭರವಸೆಯನ್ನು ಬೊಮ್ಮಾಯಿ ನೀಡಿದ್ರು.