ಬೆಂಗಳೂರು: ಜೆಡಿಎಸ್ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್ ಆಗಿದೆ. ಹೌದು. ಇದೇ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಸಮ್ಮುಖದಲ್ಲಿ ಮಧು ಬಂಗಾರಪ್ಪ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಈ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಉಪಸ್ಥಿತರಿರಲಿದ್ದಾರೆ. ಮಧು ಬಂಗಾರಪ್ಪ ಅವರ ಜೊತೆ ಇನ್ನೂ ಹಲವು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗಿದೆ.