ಕೂಗು ನಿಮ್ಮದು ಧ್ವನಿ ನಮ್ಮದು

ಯಡಿಯೂರಪ್ಪ ಕೈಯಲ್ಲಿ ಆಗದ್ದು, ಬೊಮ್ಮಾಯಿ ಕೈಯಲ್ಲಿ ಆಗುತ್ತಾ.?: ಸಿದ್ದರಾಮಯ್ಯ ಲೇವಡಿ

ಮೈಸೂರು: ಯಡಿಯೂರಪ್ಪನ ಕೈಲೆ ಕೇಂದ್ರದಿಂದ ಪರಿಹಾರ ತರಲು ಆಗಲಿಲ್ಲ. ಇನ್ನು ಬಸವರಾಜ ಬೊಮ್ಮಾಯಿ ತರ್ತಾರ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ರಾಜ್ಯದಲ್ಲಿ ಕೊರೋನ ಮೂರನೇ ಅಲೆಯ ಭೀತಿ ಶುರುವಾಗಿದೆ. ನೆರೆ ಹಾವಳಿ ಕೂಡ ಹೆಚ್ಚಾಗಿದೆ. ಇದನ್ನ ಬಸವರಾಜ್ ಬೊಮ್ಮಾಯಿ ನಿಭಾಯಿಸುವ ವಿಶ್ವಾಸವಿಲ್ಲ ಎಂದಿದ್ದಾರೆ.

ಅಧಿಕಾರಿಗಳು ನೆರೆ ಹಾವಳಿಯನ್ನ ನಿಭಾಯಿಸುತ್ತಿದ್ದಾರೆ. ಅಧಿಕಾರಿಗಳನ್ನ ಸಿಎಂ ವಿಶ್ವಾಸಕ್ಕೆ ಪಡೆದು ಕೆಲಸ ಮಾಡಬೇಕು. ಏಕವ್ಯಕ್ತಿ ಸಂಪುಟದಿಂದ ಇವೆಲ್ಲವನ್ನ ನಿರ್ವಹಿಸಲು ಸಾಧ್ಯವಿಲ್ಲ ಎಂದಿರುವ ಸಿದ್ದರಾಮಯ್ಯ, ಆದಷ್ಟು ಬೇಗ ಸಚಿವ ಸಂಪುಟ ರಚನೆಯನ್ನೂ ಮಾಡಬೇಕು ಎಂದಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಬಳಿ ರಾಜ್ಯದ ಪಾಲು ಕೇಳುವ ವಿಚಾರವನ್ನು ಪ್ರಸ್ತಾಸಿದ ಸಿದ್ದರಾಮಯ್ಯ, ಕೇಂದ್ರದಿಂದ ರಾಜ್ಯದ ಪಾಲು ತರಲು ಯಡಿಯೂರಪ್ಪನಿಗೇ ಆಗಲಿಲ್ಲ, ಇನ್ನು ಬಸವರಾಜ ಬೊಮ್ಮಾಯಿಗೆ ಆಗುತ್ತಾ..? ಬಿಜೆಪಿಯಲ್ಲೇ ಬೆಳೆದ ಯಡಿಯೂರಪ್ಪಗೆ ಅನುದಾನ ತರಲು ಸಾಧ್ಯವಾಗಲಿಲ್ಲ. ಇನ್ನು ಜನತಾದಳದಿಂದ ಹೋದ ಬಸವರಾಜ ಬೊಮ್ಮಾಯಿಗೆ ಆಗುತ್ತಾ.‌.? ಕೇಂದ್ರದವ್ರು ಜನತಾದಳದಿಂದ ಹೋದವರ ಮಾತು ಕೇಳುತ್ತಾರಾ..? ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಮತ್ತೆ ಜನತಾದಳದಿಂದ ಸಿಎಂ ಆದರು ಎಂದು ಉಲ್ಲೇಖಿಸಿದ ಸಿದ್ದರಾಮಯ್ಯ. ಸಚಿವ ಸಂಪುಟ ಆಗಬೇಕಿತ್ತು. ನಿನ್ನೆ ಬೊಮ್ಮಾಯಿ‌ ದೆಹಲಿಯಲ್ಲಿ ಇದರ ಬಗ್ಗೆ ಚರ್ಚೆ ಮಾಡಿದಂತೆ ಕಾಣುತ್ತಿಲ್ಲ. ಮುಂದಿನ ಬಾರಿ ಆಗಬಹುದು. ಕರೊನಾ ಹಿನ್ನೆಲೆಯಲ್ಲಿ ಆದಷ್ಟು ಬೇಗ ಪರಿಗಣಿಸಬೇಕು ಎಂದಿದ್ದಾರೆ.

error: Content is protected !!