ಕೂಗು ನಿಮ್ಮದು ಧ್ವನಿ ನಮ್ಮದು

ಅಹವಾಲು ಆಲಿಸಿ, ಜನರಿಗೆ ಅಭಯ ನೀಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ – ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧ ಭಾಗಗಳ ಜನರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳ ಕುರಿತು ಸ್ಪಂದಿಸಿದರು.

ಮಾರ್ಕಂಡೇಯ ನಗರ, ಚಂದನಹೊಸೂರ, ಬೆಕ್ಕಿನಕೇರಿ, ಗೆಜಪತಿ ಮೊದಲಾದ ಗ್ರಾಮಗಳ ಸ್ಥಳೀಯ ಸಮಸ್ಯೆಗಳ ಬಗ್ಗೆ ಹಾಗೂ ಈಗಾಗಲೇ ಅಭಿಪಡಿಸಿದ ದೇವಸ್ಥಾನಗಳ, ರಸ್ತೆಗಳ ಹಾಗೂ ಇನ್ನಿತರ ಕೆಲಸಗಳ ಬಗ್ಗೆ ಸಾರ್ವಜನಿಕರೊಂದಿಗೆ ಲಕ್ಷ್ಮಿ ಹೆಬ್ಬಾಳಕರ್ ಚರ್ಚಿಸಿದರು.

ಹಂತ ಹಂತವಾಗಿ ಕ್ಷೇತ್ರದ ಎಲ್ಲ ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿದ್ದು, ಯಾವುದೇ ಕೆಲಸಗಳು ಬಾಕಿ ಉಳಿಯದಿರುವ ಹಾಗೇ ನೋಡಿಕೊಳ್ಳುತ್ತಿದ್ದೇನೆ. ನನ್ನ ಗಮನಕ್ಕೆ ಬಂದ ಎಲ್ಲ ಕೆಲಸಗಳನ್ನು ಆದ್ಯತೆಯ ಮೇಲೆ ಮಾಡುತ್ತಿದ್ದೇನೆ. ತ್ವರಿತಗತಿಯಲ್ಲಿ ಅಭಿವೃದ್ದಿ ಕೆಲಸಗಳಿಗೆ ಸ್ಪಂದಿಸುತ್ತಿದ್ದೇನೆ. ಕ್ಷೇತ್ರದ ಜನರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದಗಳ ಫಲದಿಂದ ಕ್ಷೇತ್ರವನ್ನು ಮುನ್ನಡೆಸುತ್ತಿದ್ದೇನೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ತಿಳಿಸಿದರು.

ಏನೇ ಸಮಸ್ಯೆಗಳಿದ್ದರೂ ಬಂದು ಚರ್ಚಿಸಿ. ಯಾರೂ ಹಿಂಜರಿಯುವ ಅಗತ್ಯವಿಲ್ಲ. ಕ್ಷೇತ್ರದ ಜನರಿಗೆ ನಾನು ಸದಾ ಲಭ್ಯವಿರುತ್ತೇನೆ. ನಿಮ್ಮೊಂದಿಗೆ ನಾನಿದ್ದೇನೆ ಎಂದು ಶಾಸಕರು ಅಭಯ ನೀಡಿದರು.

error: Content is protected !!