ಬೆಂಗಳೂರು: ರಾಜ್ಯದ ಹಲವು ಕಡೆ ಮುಂದಿನ ೪ ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆಯನ್ನು ನೀಡಿದೆ. ಇನ್ನೂ ಅಗಸ್ಟ್ ೮ ರಿಂದ ೧೨ ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಬೆಂಗಳೂರು ವಿಭಾಗದ ನಿರ್ದೇಶಕ C.S ಪಾಟೀಲ್ ಅವರಿಗೆ ತಿಳಿಸಿದ್ರು.
ಇನ್ನೂ ಉತ್ತರ ಒಳನಾಡಿನಲ್ಲಿ ಕೆಲವು ಕಡೆ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ ೮ ರಿಂದ ೧೨ ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆಯು ಇದೆ ಎನ್ನಲಾಗಿದೆ. ಜೊತೆಗೆ ಇಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಉತ್ತರ, ದಕ್ಷಿಣ ಒಳನಾಡಿನ ಬಹುತೇಕ ಕಡೆಯೂ ಸಹ ಮಳೆಯಾಗಿದೆ.