ನವದೆಹಲಿ: ಕೋವಿಡ್ ನಿಂದ ಮೃತಪಟ್ಟಿರುವ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿಯವರ ಮೂರ್ತಿಯನ್ನು ದೆಹಲಿಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇನ್ನೂ ದೆಹಲಿಯಲ್ಲಿರುವ ವೀರಶೈವ ರುದ್ರಭೂಮಿ ಬಳಿ ದಿವಂಗತ ಸುರೇಶ್ ಅಂಗಡಿ ಕುಟುಂಬಸ್ಥರಿಂದ ಮೂರ್ತಿ ಸ್ಥಾಪನೆ ಮಾಡಲಾಯಿತು. ಜೊತೆಗೆ ಸಂಸದೆ ಮಂಗಳಾ ಅಂಗಡಿ ಪತಿಯ ಮೂರ್ತಿಗೆ ಪೂಜೆಯನ್ನು ಸಲ್ಲಿಸಿದ್ರು. ಇನ್ನೂ ಸಂಸದರಾದ ಡಿ.ವಿ.ಸದಾನಂದಗೌಡ, ನಳಿನ್ ಕುಮಾರ್ ಕಟೀಲ್, ರಮೇಶ್ ಜಾರಕಿಹೊಳಿ ಸೇರಿದಂತೆ ರಾಜ್ಯದ ಹಲವು ಸಂಸದರು ಈ ವೇಳೆ ಭಾಗಿಯಾಗಿದ್ರು.
ಇನ್ನೂ ಇವತ್ತು ನವದೆಹಲಿಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ್ ಅಂಗಡಿ ಅವರ ಸಮಾಧಿಯ ಸ್ಥಳದಲ್ಲಿ ಸುರೇಶ್ ಅಂಗಡಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ಮಾಡಲಾಯಿತು. ಜೊತೆಗೆ ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್, ಸಂಸದರು ಮತ್ತು ಸುರೇಶ್ ಅಂಗಡಿ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು ಎಂದು ಸಂಸದರಾದ ಡಿ.ವಿ.ಸದಾನಂದಗೌಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.